About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಸಚಿವ ಸ್ಥಾನ ಕೇಳಲ್ಲ, ಕೊಟ್ಟರೆ ಸಮರ್ಥವಾಗಿ ನಿಭಾಯಿಸುತ್ತೇನೆ: ಅನಿತಾ ಕುಮಾರಸ್ವಾಮಿ

ಬೆಂಗಳೂರು: ನಾನೆಂದೂ ನಂಗೆ ಸಚಿವ ಸ್ಥಾನ ಕೊಡಿ ಎಂದು ಕೇಳಿಲ್ಲ, ಕೇಳುವುದೂ ಇಲ್ಲ. ಒಂದು ವೇಳೆ ನೀಡಿದರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

ಸ್ಪೀಕರ್ ರಮೇಶ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ, ನನ್ನನ್ನು ಆಯ್ಕೆ ಮಾಡಿದ ರಾಮನಗರ ಕ್ಷೇತ್ರದ ಜನರಿಗೆ ಧನ್ಯವಾದವನ್ನು ಸಲ್ಲಿಸುತ್ತೇನೆ. ರಾಮನಗರಕ್ಕೆ ನಾನೇ ಮೊದಲ ಮಹಿಳಾ ಶಾಸಕಿ ಎಂದರು.

ನನ್ನ ಪತಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾರೆ. ರಾಮನಗರ ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ಸಂಪುಟದಲ್ಲಿ ಸಚಿವ ಸ್ಥಾನ ನಾನು ಕೇಳುವುದಿಲ್ಲ. ಒಂದು ವೇಳೆ ಕೊಟ್ಟರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಹೇಳಿದರು.

Tags

Related Articles

Leave a Reply

Your email address will not be published. Required fields are marked *

Language
Close