Hari Paraak Column: ಕಾಡಲ್ಲಿದ್ರೂ ಹುಲಿನೇ, ರೋಡಲ್ಲಿದ್ರೂ ಹುಲಿನೇ
ಕೋರ್ಟ್‌ನಲ್ಲಿ ಜಡ್ಜ್ ತುಂಬಾ ಸಂಭಾವಿತರು. ಹಾಗಾಗಿ ಇಬ್ಬರಿಗೂ ಒಳ್ಳೆ ಮಾತಿನಲ್ಲಿ ಜತೆಯಾಗಿ ಬದು ಕೋಕೆ ಸಲಹೆ ನೀಡಿದ್ರು. ನೋ ಯೂಸ್, ಖೇಮು, ಖೇಮುಶ್ರೀ ಇಬ್ರೂ ಸುತರಾಂ ಒಪ್ಪಲಿಲ್ಲ. ಅಂತೂ ಇಂತೂ ಎಲ್ಲ ಪ್ರಯತ್ನಗಳ ನಂತರ ಜಡ್ಜ್ ಇವರಿಬ್ಬರಿಗೂ ಡೈವೋರ್ಸ್ ಕೋಡೋಕೆ ಅನುಮತಿ ಕೊಟ್ರು, ಈಗ ವಿಷಯ ಜೀವನಾಂಶಕ್ಕೆ ಬಂತು.
-
ತುಂಟರಗಾಳಿ
ನೆಟ್ ಪಿಕ್ಸ್
ಖೇಮು ಮತ್ತು ಖೇಮುಶ್ರೀ ಮಧ್ಯೆ ದಿನಾ ಜಗಳ ಆಗ್ತಾ ಇತ್ತು. ಒಂದ್ ದಿನ ಸರಿ ಇದ್ರೆ ಒಂದ್ ತಿಂಗಳು ಜಗಳ, ಕೊನೆಗೆ ಹಿಂಗೆ ದಿನಾ ಜಗಳ ಆಡ್ಕೊಂಡು ಬದುಕೋಕಾಗಲ್ಲ ಅಂತ ಇಬ್ಬರಿಗೂ ಅನ್ನಿಸಿತು. ಅದ್ಕೆ ಇಬ್ರೂ ಕೋರ್ಟ್ ಮೆಟ್ಟಿಲು ಹತ್ತಿ ಡೈವೋರ್ಸ್‌ಗೆ ಅಪ್ಲೈ ಮಾಡೋದು ಅಂತ ತೀರ್ಮಾನ ಮಾಡಿದ್ರು. ಹಂಗೆ ಮಾಡಿದ್ರು.
ಕೋರ್ಟ್‌ನಲ್ಲಿ ಜಡ್ಜ್ ತುಂಬಾ ಸಂಭಾವಿತರು. ಹಾಗಾಗಿ ಇಬ್ಬರಿಗೂ ಒಳ್ಳೆ ಮಾತಿನಲ್ಲಿ ಜತೆಯಾಗಿ ಬದುಕೋಕೆ ಸಲಹೆ ನೀಡಿದ್ರು. ನೋ ಯೂಸ್, ಖೇಮು, ಖೇಮುಶ್ರೀ ಇಬ್ರೂ ಸುತರಾಂ ಒಪ್ಪಲಿಲ್ಲ. ಅಂತೂ ಇಂತೂ ಎಲ್ಲ ಪ್ರಯತ್ನಗಳ ನಂತರ ಜಡ್ಜ್ ಇವರಿಬ್ಬರಿಗೂ ಡೈವೋರ್ಸ್ ಕೋಡೋಕೆ ಅನುಮತಿ ಕೊಟ್ರು, ಈಗ ವಿಷಯ ಜೀವನಾಂಶಕ್ಕೆ ಬಂತು.
ಖೇಮುಶ್ರೀ ‘ನಂಗೆ ತಿಂಗಳಿಗೆ 20 ಸಾವಿರ ರುಪಾಯಿ ಜೀವನಾಂಶ ಬೇಕು’ ಅಂತ ಪಟ್ಟು ಹಿಡಿದು ಕೂತಳು. ಖೇಮು ‘ನನ್ ಕೈಲಿ ಸಾಧ್ಯಾನೇ ಇಲ್ಲ’ ಅಂತ ಕೂತ. ಕೊನೆಗೆ ಖೇಮುನ ಒಟ್ಟಾರೆ ಇನ್ಕಮ, ಖೇಮುಶ್ರೀಯ ಅವಶ್ಯಕತೆ ಎಲ್ಲವನ್ನೂ ಪರಿಶೀಲಿಸಿದ ಜಡ್ಜ್ ತೀರ್ಪು ಕೊಟ್ಟರು.
ಇದನ್ನೂ ಓದಿ: Hari Paraak Column: ವಿಶ್ವಗುರು ಬರೀ ದರ್ಶನ ಕೊಡೋದು, ಸಂದರ್ಶನ ಅಲ್ಲ
‘ಎಲ್ಲ ದಾಖಲೆಗಳನ್ನು ನೋಡಿ, ಖೇಮುಶ್ರೀಯ ಪರಿಸ್ಥಿತಿಯನ್ನು ಗಮನಿಸಿ ಆಕೆಗೆ ಪ್ರತಿ ತಿಂಗಳು 20 ಸಾವಿರ ರುಪಾಯಿಗಳ ಜೀವನಾಂಶ ಕೊಡಬೇಕೆಂದು ನಾನು ತೀರ್ಮಾನ ಮಾಡಿದ್ದೇನೆ’ ಎಂದರು. ಅದನ್ನು ಕೇಳಿದ ಖೇಮು ಫುಲ್ ಖುಷಿಯಾಗಿ ಹೇಳಿದ ‘ನಿಮ್ದು ಭಾಳಾ ದೊಡ್ ಮನಸು ಸ್ವಾಮಿ, ಸಾಧ್ಯ ಆದ್ರೆ ಅವಳಿಗೆ ನಾನೂ ಆವಾಗಾವಾಗ ಅಲ್ಪ ಸ್ವಲ್ಪ ದುಡ್ ಕೊಡೋಕೆ ಟ್ರೈ ಮಾಡ್ತೀನಿ.’
ಲೂಸ್ ಟಾಕ್ - ನರಭಕ್ಷಕ ಹುಲಿ
ಅಲ್ಲಪ್ಪಾ, ಹಿಂಗೆಲ್ಲಾ ಊರೊಳಗೆ ನುಗ್ಗಿ ಮನುಷ್ಯರನ್ನ ಕೊಂದು ತಿನ್ನೋದು ತಪ್ಪಲ್ವಾ?
- ಏನ್ ತಪ್ಪು, ಹುಲಿ ಮುಪ್ಪಾದರೆ, ಹುಲ್ಲು ತಿಂತದಾ? ಉಪ್ಪು, ಹುಳಿ, ತಿಂದು ಬೆಳೆದಿರೋ ದೇಹ. ಹುಲಿ ಕಾಡಲ್ಲಿದ್ರೂ ಹುಲಿನೇ, ರೋಡಲ್ಲಿದ್ರೂ ಹುಲೀನೇ ಗೊತ್ತಾ, ಈಗ ನೀನ್ ಸಿಕ್ಕಿದೀಯಾ..ಕುತ್ತೇ ಮೇ ತೇರಾ ಜೂನ್ ಪೀ ಜಾವೂಂಗ.
ಓ...ನೀನು ಧರ್ಮೇಂದ್ರನ ಅಭಿಮಾನಿ ಅನ್ನುತ್ತೆ, ಒಂದ್ ಅರ್ಧಗಂಟೆ ಇರು. ಇವತ್ತಿನ ಡೆಡ್‌ಲೈನ್ ಮುಗಿಸ್ಕೊಂಡ್ ವಾಪಸ್ ಬರ್ತ್ತೀನಿ, ಆಮೇಲ್ ತಿನ್ನುವಂತೆ
- ಮಗಾ, ಪುಣ್ಯಕೋಟಿ ಕಾಲ ಎಲ್ಲ ಈವಾಗಿಲ್ಲಮ್ಮಾ, ಇದು ಕಲಿಗಾಲ.
ನಿಜ ಹೇಳಬೇಕಂದ್ರೆ, ಇದು ಹುಲಿಗಾಲ, ಅದ್ಸರಿ, ಈಗ ಬೋನೊಳಗೆ ಹಾಕಿದದ್ದಾರಲ್ಲ ನಿನ್ನ, ಈಗ ಹೇಳು, ನಿನ್ನ ಪ್ರಕಾರ ಯಾರು ಜಾಸ್ತಿಸ್ಟಾಂಗ್? ಮನುಷ್ಯನಾ ಅಥವಾ ಹುಲಿಯಾ?
- ಗೊತ್ತಿಲ್ಲ, ಕೆ.ವಿ. ರಾಜು ಅವರನ್ನೇ ಕೇಳಬೇಕು.
ಸರಿ, ಸರಿ, ಆದ್ರೆ, ‘ಕಾಡು ಹೋಗು ಅಂತಿದೆ, ಊರು ಬಾ ಅಂತಿದೆ’ ಅನ್ನೋ ನಿನ್ನ ಸಾಯಿಸ್ಬೇಕಂತ ಕೆಲವರು ಹೇಳಿದ್ದಾರೆ, ಏನಂತೀಯಾ?
- ಟೈಗರ್ ಪ್ರಭಾಕರ್, ಭಾಳಾ ಠಾಕ್ರೆ, ಪಟೌಡಿ ಹೀಗೆ ಹುಲಿಗಳ ಸಂತತಿ ಕಡಿಮೆಯಾಗಿದೆ. ಹಂಗಾಗಿ ನನ್ನನ್ನ ಕೊಲ್ಲಲ್ಲ ಅಂತ ಭರವಸೆ ಇದೆ.
ಸಿಕ್ಕಾಕ್ಕೊಂಡಿರೋ ಬೋನಿನಲ್ಲಿ ತಿನ್ನೋಕೆ ಬೋನ್ ಸಿಗ್ತಿಲ್ಲ, ಹಂಗೇ ಸತ್ರೂ ಸಾಯಬಹುದು ನೀನು. ಹಂಗೇನಾದ್ರೂ ಆದ್ರೆ, ನಿನ್ ಕೊನೆ ಆಸೆ ಏನು?
- ನೀವ್ಯಾರೂ ನಮ್ಮ ಹುಲಿಗಳ ಆಸೆ ತೀರ್ಸಲ್ಲ ಬಿಡ್ರಪ್ಪಾ. ಒಂದಷ್ಟು ವರ್ಷಗಳ ಹಿಂದೆ ‘ಹುಲಿ ಹಿಡಿದವರು ಕಂಡಂತೆ’ ಅಂತ ನನ್ ಮೇಲೊಂದ್ ಸಿನಿಮಾ ಮಾಡ್ತೀನಿ ಅಂತ ಹೇಳಿದ್ರು, ಆದ್ರೆ ಮಾಡದೇ ನನ್ನ ಆಸೆಗೆ ಹುಳಿ ಹಿಂಡಿಬಿಟ್ರು.