ಅನ್ನಭಾಗ್ಯ ಯೋಜನೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ

Posted In : ರಾಜ್ಯ

ದಾವಣಗೆರೆ: ಹಸಿವು ಮುಕ್ತ ಕರ್ನಾಟಕ್ಕಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಕೆಪಿಸಿಸಿ ಕಾರ್ಯದರ್ಶಿ ಡಿ.ಬಸವರಾಜ ತಿಳಿಸಿದರು.

ಗೋಷ್ಠಿಯಲ್ಲಿ ಮಾತನಾಡಿ,  ಇತ್ತೀಚೆಗೆ ನಗರಕ್ಕೆ ಭೇಟಿ ನೀಡಿದ್ದ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ರಾಜ್ಯ ಸರ್ಕಾರ ನೀಡುತ್ತಿರುವ ಅನ್ನ ಭಾಗ್ಯ ಅಕ್ಕಿ ಕೇಂದ್ರ ಸರ್ಕಾರದ ಮೋದಿ ಕೊಡುಗೆಯೇ ಹೊರತು, ಸಿದ್ದರಾಮಯ್ಯ ಅವರದ್ದಲ್ಲ ಎಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನಭಾಗ್ಯ ಜಾರಿಗೆ ಮುಂದಾದ ಸಂದರ್ಭದಲ್ಲಿ ಗಲಾಟೆ ಮಾಡಿದ್ದ, ಜನರು ಸೋಮಾರಿಗಳಾಗುತ್ತಾರೆ ಎಂದು ಟೀಕಿಸುತ್ತಿದ್ದ ಬಿಜೆಪಿಯವರು ಈಗ ಅನ್ನ ಭಾಗ್ಯ ನಮ್ಮದು ಎಂಬುದಾಗಿ ಹಸಿ ಸುಳ್ಳು ಹೇಳುತ್ತಿರುವುದು ಅತ್ಯಂತ ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ 1 ಗಂಟೆಯಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನ್ನ ಭಾಗ್ಯ ಯೋಜನೆ ಘೋಷಿಸಿದ್ದರು. ಈ ಯೋಜನೆ ಜಾರಿಗೆ ಬಂದು ಒಂದು ವರ್ಷದ ಹದಿಮೂರು ದಿನಗಳ ನಂತರ ಪ್ರಧಾನಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮೋದಿ ಅನ್ನಭಾಗ್ಯ ಆಗಲು ಹೇಗೆ ಸಾಧ್ಯ?ಉಚಿತ ಅಕ್ಕಿ ನೀಡುತ್ತಿರುವ ಅನ್ನಭಾಗ್ಯ ಯೋಜನೆ ಮೋದಿಯವರದ್ದೇಯಾದರೆ, ದೇಶದ 19 ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಆ ರಾಜ್ಯಗಳಲ್ಲಿ ಏಕೆ ಈ ಯೋಜನೆ ಜಾರಿಯಲ್ಲಿಲ್ಲ ಎಂದು ಪ್ರಶ್ನಿಸಿದರು.

Leave a Reply

Your email address will not be published. Required fields are marked *

twelve + 16 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

Friday, 23.02.2018

ಶ್ರೀಹೇಮಲಂಬಿ, ಉತ್ತರಾಯಣ, ಶಿಶಿರಋತು, ಪಾಲ್ಗುಣ ಮಾಸ, ಶುಕ್ಲಪಕ್ಷ, ಅಷ್ಟಮಿ, ಶುಕ್ರವಾರ, ನಿತ್ಯ ನಕ್ಷತ್ರ-ಕೃತ್ತಿಕಾ, ಯೋಗ-ವೈಧೃತಿ, ಕರಣ-ಭದ್ರೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 7.30-9.00 3.00-4.30

Read More

 

Friday, 23.02.2018

ಶ್ರೀಹೇಮಲಂಬಿ, ಉತ್ತರಾಯಣ, ಶಿಶಿರಋತು, ಪಾಲ್ಗುಣ ಮಾಸ, ಶುಕ್ಲಪಕ್ಷ, ಅಷ್ಟಮಿ, ಶುಕ್ರವಾರ, ನಿತ್ಯ ನಕ್ಷತ್ರ-ಕೃತ್ತಿಕಾ, ಯೋಗ-ವೈಧೃತಿ, ಕರಣ-ಭದ್ರೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 7.30-9.00 3.00-4.30

Read More

Back To Top