About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ನಾಗರಿಕ ಸ್ನೇಹಿ ಸೇವೆ: ಕೆಎಸ್ಸಾರ್ಟಿಸಿಗೆ ಮತ್ತೊಂದು ಗರಿ

ಬೆಂಗಳೂರು: ಕೆಎಸ್ಸಾರ್ಟಿಸಿಯ ನಾಗರಿಕ ಸ್ನೇಹಿ ಸೇವೆಗೆ ರಾಜ್ಯ ಮಟ್ಟದ ಇ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು 5 ಲಕ್ಷ ನಗದು, ಪ್ರಶಸ್ತಿ ಫಲಕ, ಪ್ರಮಾಣ ಪತ್ರ ಒಳಗೊಂಡಿದೆ.

ಕೆಎಸ್ಸಾರ್ಟಿಸಿಯು ಅನುಷ್ಠಾನಗೊಳಿಸಿರುವ ‘‘ಸ್ಟಾಫ್ ಡ್ಯುಟಿ ರೋಟಾ ಆ್ಯಂಡ್ ಲೀವ್ ಮ್ಯಾನೇಜ್‌ಮೆಂಟ್ ಸಿಸ್ಟಮ್’’ ಗೆ ನಾಗರಿಕ ಸ್ನೀಹಿ ರಾಜ್ಯ ಮಟ್ಟದ ಇ -ಆಡಳಿತ ಪ್ರಶಸ್ತಿ ಸಂದಿದೆ. ನಾಗರಿಕ ಸ್ನೇಹಿ ಇ-ಆಡಳಿತ ಯೋಜನೆಗಳನ್ನು ರಾಜ್ಯ ಮಟ್ಟದಲ್ಲಿ ಅನುಷ್ಠಾನಗೊಳಿಸುತ್ತಿರುವ ಇಲಾಖೆಗಳ ಹಾಗೂ ಸಂಸ್ಥೆಗಳಿಗೆ ರಾಜ್ಯ ಮಟ್ಟದ ಇ-ಆಡಳಿತ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಮುಖ್ಯ ಕಾರ್ಯದರ್ಶಿ ಟಿ.ಎಮ್. ವಿಜಯ ಭಾಸ್ಕರ್ ಅವರು ಕೆಎಸ್ಸಾರ್ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಎಸ್.ಆರ್.ಉಮಾಶಂಕರ್ ಅವರಿಗೆ ಪ್ರಧಾನಿಸಿದರು. ಈ ವೇಳೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ಅಪರ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ , ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಮತ್ತಿತರರು ಇದ್ದರು.

Tags

Related Articles

Leave a Reply

Your email address will not be published. Required fields are marked *

Language
Close