About Us Advertise with us Be a Reporter E-Paper

Breaking Newsದೇಶಪ್ರಚಲಿತ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ ನ್ಯಾಯಮೂರ್ತಿಗಳ ಬಳಿ ವರದಿ ಕೇಳಿದ ಸುಪ್ರೀಂ

ದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳಾದ ಆರ್.ಕೆ.ನಾರೀಮನ್ ಹಾಗೂ ಮಲ್ಹೋತ್ರಾ ಅವರ ಪೀಠದಿಂದ ಸುಪ್ರೀಂಕೋರ್ಟ್ ಸೋಮವಾರ ವರದಿಯನ್ನು ಕೇಳಿದೆ.

ಬಿಜೆಪಿಯ ಹಿರಿಯ ಎಲ್.ಕೆ.ಅಡ್ವಾಣಿ, ಎಂಎಂ ಜೋಷಿ ಹಾಗೂ ಉಮ ಭಾರತಿ ವಿರುದ್ಧದ ವಿಚಾರಣೆಯನ್ನು 2019ರ ಏಪ್ರಿಲ್ ಗಡುವಿನೊಳಗೆ ಪೂರ್ಣಗೊಳಿಸಲು ಯಾವ ರೀತಿಯ ಉದ್ದೇಶ ಹೊಂದಲಾಗಿದೆ ಎಂಬುದರ ಕುರಿತು ವರದಿ ಸಲ್ಲಿಸುವಂತೆ ವಿಚಾರಣಾಧೀನ ನ್ಯಾಯಮೂರ್ತಿಗಳಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ.

ಹಾಗೂ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವವರೆಗೂ ಪದೋನ್ನತಿಯನ್ನು ತಡೆ ಹಿಡಿದಿರುವ ಅಲಹಾಬಾದ್ ನ್ಯಾಯಲಯದ ಆದೇಶವನ್ನು ಪ್ರಶ್ನಿಸಿ ನ್ಯಾಯಮೂರ್ತಿ ಎಸ್.ಕೆ.ಯಾದವ್ ಅವರ ಅರ್ಜಿ ಕುರಿತಂತೆ ಪ್ರತಿಕ್ರಿಯೆ ನೀಡುವಂತೆ ಉತ್ತರಪ್ರದೇಶ ಸರಕಾರವೂ ಸುಪ್ರೀಂಕೋರ್ಟ್‌ಗೆ ಸೂಚಿಸಿದೆ. ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಸೂಚಿಸಿದೆ.

2017 ಏಪ್ರಿಲ್ 19 ರಂದು ನಡೆದಿದ್ದ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಸೇವಕರು, ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಉಮಾಭಾರತಿ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ವಿಚಾರಣೆಗೆ ಗ್ರೀನ್ ಸಿಗ್ನಲ್ ನೀಡಿತ್ತು.

ಬಾಬ್ರಿ ಮಸೀದಿ ಧ್ವಂಸಗೊಳಿಸಲು ರೂಪಿಸಲಾಗಿದ್ದ ಸಂಚು ಪ್ರಕರಣದ ಬಗ್ಗೆ ಲಖನೌ ಹಾಗೂ ರಾಯ್ ಬರೇಲಿಯ ನ್ಯಾಯಾಲಯದಲ್ಲಿ ಪ್ರತ್ಯೇಕ ವಿಚಾರಣೆ ಎಂದಿದ್ದ ನ್ಯಾಯಾಲಯ, 4 ವಾರಗಳಲ್ಲಿ ವಿಚಾರಣೆ ಪ್ರಾರಂಭವಾಗಿ 2 ವರ್ಷಗಳಲ್ಲಿ ಪ್ರಕರಣದ ವಿಚಾರಣೆ ಮುಕ್ತಾಯಗೊಳ್ಳಬೇಕು ಅಂದರೆ, 2019ರ ಏಪ್ರಿಲ್ ತಿಂಗಳೊಳಗಾಗಿ ವಿಚಾರಣೆ ಮುಕ್ತಾಯಗೊಳ್ಳಬೇಕೆಂದು ಸೂಚಿಸಿತ್ತು.

Tags

Related Articles

Leave a Reply

Your email address will not be published. Required fields are marked *

Language
Close