About Us Advertise with us Be a Reporter E-Paper

Breaking Newsದೇಶಪ್ರಚಲಿತ

ಜಮ್ಮು-ಕಾಶ್ಮೀರದಲ್ಲಿ ಐಇಡಿ ಸ್ಫೋಟ: ಸೇನಾ ಮೇಜರ್, ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೋರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಬಳಿ ಶಂಕಿತ ಭಯೋತ್ಪಾದಕರು ಶುಕ್ರವಾರ ಐಇಡಿ ಸ್ಫೋಟಿಸಿದ ಪರಿಣಾಮ ಓರ್ವ ಸೇನಾ ಮೇಜರ್ ಹಾಗೂ ಒಬ್ಬ ಯೋಧ ಹುತಾತ್ಮರಾಗಿದ್ದಾರೆ.

ರಾಜೋರಿ ಜಿಲ್ಲೆಯ ನೌಷೆರಾ ಸೆಕ್ಟರ್ ನಲ್ಲಿ ಶಂಕಿತ ಭಯೋತ್ಪಾದಕರು ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಎಲ್‍ಒಸಿ ಬಳಿ ಇರುವ ಕಾಲುದಾರಿಯಲ್ಲಿ ಸುಧಾರಿತ ಸ್ಫೋಟಕ ಬಾಂಬ್(ಐಇಡಿ) ಫಿಕ್ಸ್ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟದಲ್ಲಿ ಮೇಜರ್ ಸೇರಿದಂತೆ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾಗಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close