About Us Advertise with us Be a Reporter E-Paper

Breaking Newsದೇಶಪ್ರಚಲಿತ

ಸಾಮೂಹಿಕ ಅತ್ಯಾಚಾರ ಪ್ರಕರಣ: ಯೋಧ ಸೇರಿ ಇಬ್ಬರ ಬಂಧನ

ಚಂಡೀಗಢ: ಸಿಬಿಎಸ್‌ಸಿ ಟಾಪರ್ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಧ ಸೇರಿ ಇಬ್ಬರು ಪ್ರಮುಖ ಆರೋಪಿಗಳನ್ನು ಹರಿಯಾಣ ಪೊಲೀಸರು ಬಂಧಿಸಿದ್ದಾರೆ.

ಯೋಧ ಮನೀಷ್ ಮತ್ತು ಪಂಕಜ್ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದು, ಇಬ್ಬರನ್ನೂ ಭಾನುವಾರ ಬಂಧಿಸಲಾಗಿದೆ. ಅತ್ಯಾಚರದ ಬಳಿಕ ಈ ಇಬ್ಬರು ತಲೆ ಮರೆಸಿಕೊಂಡಿದ್ದರು ಎಂದು ಬಿ.ಎಸ್.ಸಂಧು ಹೇಳಿದ್ದಾರೆ. ರಾಷ್ಟ್ರಾದ್ಯಂತ ಚರ್ಚೆಗೆ ಒಳಗಾಗಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ನಿಶು ಹಾಗೂ ಮತ್ತಿಬ್ಬರು ಆರೋಪಿಗಳನ್ನು ಬಂಧೀಸಲಾಗಿತ್ತು.

ಸಿಬಿಎಸ್‌ಇ ಪರೀಕ್ಷೆಯಲ್ಲಿ ದೇಶಕ್ಕೇ ಟಾಪರ್ ಆಗಿ, ರಾಷ್ಟ್ರಪತಿಗಳಿಂದ ಸನ್ಮಾನ ಸ್ವೀಕರಿಸಿದ್ದ 19 ವರ್ಷದ ಕಾಲೇಜು ವಿದ್ಯಾರ್ಥಿನಿ ಕೋಚಿಂಗ್ ಕೇಂದ್ರಕ್ಕೆ ಹೋಗುತ್ತಿದ್ದಾಗ ಆಕೆಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಗುರಗಾಂವ್‌ನಿಂದ 116 ಕಿ.ಮೀ ದೂರದ ಬಸ್ ನಿಲ್ದಾಣವೊಂದರಲ್ಲಿ ಅರೆ ನಗ್ನ ಸ್ಥಿತಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಯುವತಿ ಪತ್ತೆಯಾಗಿದ್ದಳು.

ಸ್ಥಳೀಯರು ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಸಾಮೂಹಿಕ ಅತ್ಯಾಚಾರ ವಿಚಾರ ಬೆಳಕಿಗೆ ಬಂದಿತ್ತು. ಪ್ರಕರಣ ದಾಖಲಿಸಿದ್ದ ಪೊಲೀಸರು ತನಿಖೆಗಾಗಿ ವಿಶೇಷ ತನಿಖಾ ದಳ(ಎಸ್‌ಐಟಿ) ರಚಿಸಿದ್ದರು. ಹೆಚ್ಚುವರಿ ಪೊಲೀಸ್‌ ನಿರ್ದೇಶಕ ಶ್ರೀಕಾಂತ್ ಜಾದವ್ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close