About Us Advertise with us Be a Reporter E-Paper

Breaking Newsರಾಜ್ಯ

ವ್ಹೀಲಿಂಗ್ ಮಾಡುತ್ತಿದ್ದ ಆರು ಮಂದಿ ಯುವಕರು ಅರೆಸ್ಟ್

ಬೆಂಗಳೂರು: ನಗರದಲ್ಲಿ ಅಪಾಯಕಾರಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವ್ಹೀಲಿಂಗ್ ಮಾಡುವವರ ವಿರುದ್ಧ ಹದ್ದಿನ ಕಣ್ಣಿಟ್ಟಿರುವ ಪೊಲೀಸ್ ಇಲಾಖೆ ಇದೀಗ ಆರು ಮಂದಿಯನ್ನು ಬಂಧಿಸಿದ್ದಾರೆ.

ನೈಸ್ ರೋಡ್, ಮೈಸೂರು ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಆರು ಮಂದಿ ಯುವಕರನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿಕರಿಂದ ಬೈಕ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಟಂಟ್, ವ್ಹೀಲಿಂಗ್‍ನಿಂದ ಹಲವು ಮಂದಿ ಜೀವ ಕಳೆದುಕೊಂಡಿದ್ದಾರೆ. ಆದ್ರೂ ಯುವಕರು ಅಪಾಯಕಾರಿ ಸಾಹಸಕ್ಕೆ ಮುಂದಾಗಿದ್ದು, ಇದೀಗ ಆರು ಮಂದಿ ಯುವಕರಿಗೆ ಖಾಕಿ ಕೋಳ ಹಾಕಿದೆ.

Tags

Related Articles

Leave a Reply

Your email address will not be published. Required fields are marked *

Language
Close