About Us Advertise with us Be a Reporter E-Paper

Breaking Newsಕ್ರೀಡೆಪ್ರಚಲಿತ

ಏಷ್ಯನ್ ಗೇಮ್ಸ್: ಬೆಳ್ಳಿಗೆ ತೃಪ್ತಿಪಟ್ಟ ಮಹಿಳೆಯರ ಹಾಕಿ ತಂಡ

ಜಕಾರ್ತ: ಇಂಡೇನೇಷ್ಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2018 ಕ್ರೀಡಾಕೂಟದ ಮಹಿಳಾ ಹಾಕಿ ವಿಭಾಗದಲ್ಲಿ ಭಾರತೀಯ ತಂಡ ಬೆಳ್ಳಿ ಪದಕ ಗೆದ್ದುಕೊಂಡಿದೆ.

ಶುಕ್ರವಾರ ನಡೆದ ಫೈನಲ್ ಪಂದ್ಯದಲ್ಲಿ ಜಪಾನ್ ವಿರುದ್ಧ 1-2ರ ಗೋಲುಗಳ ಅಂತರದಲ್ಲಿ ಮಣಿದ ಭಾರತ ತಂಡವು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿತು. ಅನೇಕ ಅವಕಾಶಗಳನ್ನು ಕೈಚೆಲ್ಲಿದ ಭಾರತೀಯ ತಂಡ ಅಂತಿಮವಾಗಿ ಹಿನ್ನಡೆ ಅನುಭವಿಸಬೇಕಾಯಿತು.

ಬೆಳ್ಳಿ ಗೆದ್ದಿರುವ ಮಹಿಳೆಯರ ಹಾಕಿ ತಂಡಕ್ಕೆ ಸಾಮಾಜಿಕ ಜಾಲತಾಣದಲ್ಲಿ, ಪ್ರಧಾನಿ ಮೋದಿ, ಅಮಿತ್‌ ಶಾ, ರಾಹುಲ್‌, ಕೇಂದ್ರ ಕ್ರೀಡಾ ಸಚಿವ ರಾಜವರ್ಧನ್‌ ರಾಥೋರ್‌ ಸೇರಿದಂತೆ ಹಲವರು ಶುಭ ಕೋರಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close