About Us Advertise with us Be a Reporter E-Paper

Breaking Newsದೇಶಪ್ರಚಲಿತ

ಲೋಕಸಭೆ ಚುನಾವಣೆ ಮೇಲೆ ಈ ಫಲಿತಾಂಶ ಪರಿಣಾಮ ಬೀರಲ್ಲ: ಯಡಿಯೂರಪ್ಪ

ಬೆಳಗಾವಿ: ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಸೆಫಿಫೈನಲ್ ಎಂದೇ ಬಿಂಬಿಸಲ್ಪಟ್ಟಿದ್ದ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಕೇಂದ್ರ ಆಡಳಿತಾರೂಢ ಬಿಜೆಪಿಗೆ ಎಚ್ಚರಿಕೆ ಗಂಟೆಯಾದ್ದರೆ ಕಾಂಗ್ರೆಸ್ ಗಣನೀಯವಾಗಿ ಚೇತರಿಸಿಕೊಂಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ಪಂಚರಾಜ್ಯ ಚುನಾವಣೆಯಲ್ಲಿ ನಮಗೆ ಸ್ವಲ್ಪ ಹಿನ್ನಡೆಯಾಗಿದೆ. ಸೋಲಿನ ಬಗ್ಗೆ ಚರ್ಚೆ ಮಾಡಿ ಸರಿಪಡಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ಮೇಲೆ ಈ ಫಲಿತಾಂಶ ಯಾವುದೇ ರೀತಿಯ ಪರಿಣಾಮ ಬೀರಲ್ಲ. ಪ್ರಧಾನಿ ನರೇಂದ್ರ ಮೋದಿ ಅವರಂಥ ವ್ಯಕ್ತಿ ಬೇರೆ ಯಾವುದೇ ಪಕ್ಷದಲ್ಲಿಲ್ಲ. ಇಡೀ ದೇಶವೇ ಮೆಚ್ಚುವ ಮನುಷ್ಯ ಪ್ರಧಾನಿ ಮೋದಿ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಬಿಜೆಪಿ ಹಿಡಿತದಲ್ಲಿದ್ದ ಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಡದಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದ್ದರೆ ತೆಲಂಗಾಣದಲ್ಲಿ ಮತ್ತೆ ಟಿಆರ್‌ಎಸ್ ಅಧಿಕಾರ ಹಿಡಿದಿದೆ. ಮಿಜೋರಾಂನಲ್ಲಿ ಕಾಂಗ್ರೆಸ್ ಮುಗ್ಗರಿಸಿದ್ದು ಎಂಎನ್‌ಎಫ್ ಅಧಿಕಾರಕ್ಕೆ ಬಂದಿದೆ. ಮಧ್ಯ ಪ್ರದೇಶ ಮತ್ತು ಛತ್ತೀಸ್‌ಗಡದಲ್ಲಿ ಸತತ ಮೂರು ಅವಧಿಯಿಂದ ಆಡಳಿತದ ಚುಕ್ಕಾಣಿ ಹಿಡಿದಿದ್ದ ಬಿಜೆಪಿ ಪ್ರಧಾನಿ ಮೋದಿ ಅವರ ಬಿರುಸಿನ ಪ್ರಚಾರದ ನಡುವೆಯೂ ಮುಗ್ಗರಿಸಿದೆ. ಕಳೆದ ಅವಧಿಯಲ್ಲಿ ರಾಜಸ್ಥಾನದಲ್ಲಿ ಅಧಿಕಾರ ಹಿಡಿದಿದ್ದ ಬಿಜೆಪಿ ಈ ರಾಜ್ಯವನ್ನೂ ಕಳೆದುಕೊಂಡಿದೆ.

2019ರಲ್ಲಿ ನಡೆಯಲಿರುವ ಲೋಕಸಭಾ ಸೆಮಿ ಫೈನಲ್ ಎಂದೇ ಬಿಂಬಿತವಾಗಿದ್ದ ಈ ಚುನಾವಣಾ ಫಲಿತಾಂಶ ಪ್ರತಿಪಕ್ಷಗಳಿಗೆ ಆನೆ ಬಲ ತಂದಿದೆ. ಬಿಜೆಪಿ ಪಾಳಯದಲ್ಲಿ ಆತಂಕ ಮೂಡಿದ್ದು, ಎಲ್ಲಿ ಎಡವಿದ್ದೇವೆ ಎಂದು ಆತ್ಮ ವಿಮರ್ಶೆಯಲ್ಲಿ ತೊಡಗಿದ್ದಾರೆ. ಆಡಳಿತ ವಿರೋಧಿ ಅಲೆಯೇ ಸೋಲಿಗೆ ಕಾರಣ ಎಂದು ವಿಶ್ಲೇಶಿಸಲಾಗುತ್ತಿದೆ.

Tags

Related Articles

Leave a Reply

Your email address will not be published. Required fields are marked *

Language
Close