Breaking Newsದೇಶಪ್ರಚಲಿತ
ದಿ.ಅಟಲ್ ಬಿಹಾರಿ ವಾಜಪೇಯಿ 94ನೇ ಜನ್ಮದಿನ: ಗಣ್ಯರಿಂದ ಪುಷ್ಪನಮನ

ದೆಹಲಿ: ಇಂದು ಅಜಾತ ಶತ್ರು, ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಅವರ 94ನೇ ಜನ್ಮದಿನ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯಾತಿ ಗಣ್ಯರು ಪುಷ್ಪ ನಮನ ಸಲ್ಲಿಸಿದ್ದಾರೆ.
ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ವಾಜಪೇಯಿ ಸಮಾಧಿಗೆ ಪ್ರಧಾನಿಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಸೇರಿದಂತೆ ನೂರಾರು ಗಣ್ಯರು ಪುಷ್ಪನಮನ ಸಲ್ಲಿಸಿದರು.
ವಾಜಪೇಯಿಯವರ ಜನ್ಮದಿನ ಹಿನ್ನೆಲೆಯಲ್ಲಿ ಸೋಮವಾರ ಅಟಲ್ ಸ್ಮರಣಾರ್ಥ ರೂ.100 ಮುಖಬೆಲೆಯ ನಾಣ್ಯವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದ್ದರು.
Delhi: PM Narendra Modi pays tribute to #AtalBihariVajpayee at Rashtriya Smriti Sthal. Today is Vajpayee's 94th birth anniversary pic.twitter.com/4bLk9llaru
— ANI (@ANI) December 25, 2018