ಶಾಂತ ವಿದ್ಯಾನಿಕೇತನದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ
ವಿದ್ಯಾರ್ಥಿಗಳು ಶ್ರೀಕೃಷ್ಣನ ಜೀವನ ಹಾಗೂ ಬಾಲಲೀಲೆಯನ್ನು ಆಧರಿಸಿದ ಕಿರು ನಾಟಕವನ್ನು ಮನೋಜ್ಞವಾಗಿ ಪ್ರದರ್ಶಿಸಿದರು. ಶ್ರೀಕೃಷ್ಣನ ಬಾಲ್ಯ, ತುಂಟತನ ಹಾಗೂ ಜೀವನ ಸಂದೇಶಗಳನ್ನು ತಮ್ಮ ಅಭಿನಯದ ಮೂಲಕ ಪ್ರೇಕ್ಷಕರಿಗೆ ಪರಿಚಯಿಸಿದರು. ಇದೇ ವೇಳೆ ಕೃಷ್ಣನಿಗೆ ಸಂಬಂಧಿಸಿದ ಭಕ್ತಿಗೀತೆಗಳು ಹಾಗೂ ಭಜನೆಗಳನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಭಕ್ತಿಯ ಸೊಬಗು ತುಂಬಿದರು.