ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
Profile

Prabhakara R

prabhakara@vishwavani.news

Articles
Bike Taxi Service: ರ‍್ಯಾಪಿಡೋ, ಓಲಾ, ಉಬರ್‌ ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಕ್ಕೆ ರಾಜ್ಯ ಸರ್ಕಾರ ಆದೇಶ

ರ‍್ಯಾಪಿಡೋ, ಉಬರ್‌ ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಕ್ಕೆ ರಾಜ್ಯ ಸರ್ಕಾರ ಆದೇಶ

Bike Taxi Service: ರಾಜ್ಯ ಸಾರಿಗೆ ಸಂಘಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿಯನ್ನು ಏ.2ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಬೈಕ್ ಟ್ಯಾಕ್ಸಿಗಳ ಸೇವೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಿ, 3 ತಿಂಗಳ ಒಳಗಾಗಿ ಮಾರ್ಗಸೂಚಿ ಹೊರಡಿಸಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿತ್ತು. ಹೀಗಾಗಿ ಸರ್ಕಾರ ಆದೇಶ ಹೊರಡಿಸಿದೆ.

Pakistani citizens: ಭಟ್ಕಳದಲ್ಲೂ ಇದ್ದಾರೆ 14 ಪಾಕಿಸ್ತಾನಿ ಪ್ರಜೆಗಳು; ಗಡಿಪಾರು ಆಗ್ತಾರಾ?

ಭಟ್ಕಳದಲ್ಲೂ ಇದ್ದಾರೆ 14 ಪಾಕಿಸ್ತಾನಿ ಪ್ರಜೆಗಳು; ಗಡಿಪಾರು ಆಗ್ತಾರಾ?

Pakistani citizens: ಭಟ್ಕಳದಲ್ಲಿ ಒಟ್ಟು 14 ಪಾಕಿಸ್ತಾನಿ ಮೂಲದವರಿದ್ದು, ಅವರಲ್ಲಿ 10 ಮಹಿಳೆಯರಾಗಿದ್ದರೆ, ಮೂವರು ಮಕ್ಕಳು ಇದ್ದಾರೆ. ಇನ್ನೊಬ್ಬ ಮಹಿಳೆ ಅಕ್ರಮ ವಲಸಿಗರಾಗಿದ್ದಾರೆ. ಭಟ್ಕಳದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯ ಪಾಕ್ ಪ್ರಜೆಗಳು ಇರುವ ಸಾಧ್ಯತೆ ಇದ್ದು, ಈ ಕುರಿತು ಪೊಲೀಸರು ಮಾಹಿತಿ ಕಲೆಹಾಕುತಿದ್ದಾರೆ.

Roopa Moudgil: ಸೇವಾ ಬಡ್ತಿ; ಐಪಿಎಸ್‌ ಅಧಿಕಾರಿ ಡಿ.ರೂಪಾ ಮನವಿ ಪರಿಗಣಿಸಲು ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ರೂಪಾ ಮನವಿ ಪರಿಗಣಿಸಲು ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

Roopa Moudgil: ಎಡಿಜಿಪಿ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಹಿರಿಯ ಐಪಿಎಸ್‌ ಅಧಿಕಾರಿ ಡಿ. ರೂಪಾ ಮೌದ್ಗಿಲ್‌ ಅವರು ಸಲ್ಲಿಸಿರುವ ಮನವಿಯನ್ನು ಕಾನೂನಿನ ಅನ್ವಯ ಎರಡು ತಿಂಗಳಲ್ಲಿ ಪರಿಗಣಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.‌

Karnataka Rains: ರಾಜ್ಯದಲ್ಲಿ ಮೇ 1 ರವರೆಗೆ ಗುಡುಗು ಸಹಿತ ಭಾರಿ ಮಳೆ ನಿರೀಕ್ಷೆ!

ರಾಜ್ಯದಲ್ಲಿ ಮೇ 1 ರವರೆಗೆ ಗುಡುಗು ಸಹಿತ ಭಾರಿ ಮಳೆ ನಿರೀಕ್ಷೆ!

Karnataka Rains: ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕದ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ದಕ್ಷಿಣ ಒಳನಾಡಿನಲ್ಲೂ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಯಿಲ್ಲ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Physical Abuse: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ; ಜೀನಿ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ಎಫ್‌ಐಆರ್‌

ಲೈಂಗಿಕ ಕಿರುಕುಳ; ಜೀನಿ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ಎಫ್‌ಐಆರ್‌

Physical Abuse: ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಯರಗುಂಟೆಯಲ್ಲಿರುವ ಜೀನಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೇಘನ ಎಂಬಾಕೆ ನೀಡಿದ ದೂರಿನ ಮೇರೆಗೆ ಜೀನಿ ಸಂಸ್ಥೆ ದಿಲೀಪ್ ಕುಮಾರ್ ವಿರುದ್ಧ ಕಳ್ಳಂಬೆಳ್ಳ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Gokarna tragedy: ಗೋಕರ್ಣದಲ್ಲಿ ತಮಿಳುನಾಡಿನ ಇಬ್ಬರು ವೈದ್ಯಕೀಯ ವಿದ್ಯಾರ್ಥಿನಿಯರು ಸಮುದ್ರ ಪಾಲು

ಗೋಕರ್ಣದಲ್ಲಿ ಇಬ್ಬರು ವಿದ್ಯಾರ್ಥಿನಿಯರು ಸಮುದ್ರ ಪಾಲು

Gokarna tragedy: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಜಟಾಯು ತೀರ್ಥದಲ್ಲಿ ಘಟನೆ ನಡೆದಿದೆ. ತಮಿಳುನಾಡಿನ ತಿರುಚ್ಚಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರು ಸಮುದ್ರಕ್ಕೆ ಇಳಿದಾಗ ಅಲೆಗಳಿಗೆ ಸಿಲುಕಿ ಕೊಚ್ಚಿಹೋಗಿದ್ದಾರೆ. ರಕ್ಷಣಾ ತಂಡವು ಮೃತದೇಹಗಳನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ.

Pahalgam Terror Attack: ರಸ್ತೆ ಮೇಲೆ ಪಾಕಿಸ್ತಾನದ ಧ್ವಜ ಅಂಟಿಸಿ ಆಕ್ರೋಶ; ಕಲಬುರಗಿಯಲ್ಲಿ ಬಜರಂಗ ದಳ ಕಾರ್ಯಕರ್ತರು ವಶಕ್ಕೆ

ಕಲಬುರಗಿಯಲ್ಲಿ ರಸ್ತೆ ಮೇಲೆ ಪಾಕಿಸ್ತಾನದ ಧ್ವಜ ಅಂಟಿಸಿ ಆಕ್ರೋಶ

Pahalgam Terror Attack: ಕಲಬುರಗಿಯಲ್ಲಿ ಬಜರಂಗ ದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಆದರೆ, ಯಾವುದೇ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಲಾಗಿದೆ ಎಂದು ಬಜರಂಗ ದಳದ ಕಾರ್ಯಕರ್ತರನ್ನು ಬ್ರಹ್ಮಪುರ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

Dr K Kasturirangan: ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್‌ ನಿಧನ

ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್‌ ನಿಧನ

Dr K Kasturirangan: 1994 ರಿಂದ 2003ರವರೆಗೆ 9 ವರ್ಷಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷರಾಗಿದ್ದ ಡಾ.ಕೆ. ಕಸ್ತೂರಿ ರಂಗನ್‌ ಅವರು, 2003ರಿಂದ 2009ರವರೆಗೆ ರಾಜ್ಯಸಭೆ ಸದಸ್ಯರಾಗಿದ್ದರು. ಇನ್ನು ಇವರು ಎನ್‌ಇಪಿಯಲ್ಲಿನ ಶಿಕ್ಷಣ ಸುಧಾರಣೆಗಳ ಹಿಂದಿನ ವ್ಯಕ್ತಿಯಾಗಿದ್ದಾರೆ.

Pahalgam terror attack: ಪಹಲ್ಗಾಮ್ ಉಗ್ರರ ದಾಳಿ ಸಮರ್ಥನೆ ಮಾಡಿ ಪೋಸ್ಟ್; ಮಂಗಳೂರಿನಲ್ಲಿ ಕಿಡಿಗೇಡಿ ವಿರುದ್ಧ ಕೇಸ್‌

ಪಹಲ್ಗಾಮ್ ಉಗ್ರರ ದಾಳಿ ಸಮರ್ಥನೆ ಮಾಡಿ ಪೋಸ್ಟ್;‌ ಕೇಸ್‌ ದಾಖಲು

Pahalgam terror attack: 2023ರಲ್ಲಿ ಮಹಾರಾಷ್ಟದ ಪಾಲ್ಗರ್‌ನಲ್ಲಿ ಮೂವರು ಮುಸ್ಲಿಮರನ್ನು ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್‍ ಕುತ್ತಿಗೆಗೆ ಸಾರ್ವಜನಿಕವಾಗಿ ಹಗ್ಗ ಹಾಕಲಿಲ್ಲ. ಆ ಕಾರಣಕ್ಕೆ ಕಾಶ್ಮೀರದಲ್ಲಿ ಈ ಕೃತ್ಯ ನಡೆದಿದೆ ಎಂದು ಕಿಡಿಗೇಡಿ, ಪಹಲ್ಗಾಮ್ ಉಗ್ರರ ದಾಳಿಯನ್ನು ಸಮರ್ಥಿಸಿಕೊಂಡಿದ್ದಾನೆ.

Karnataka Rains: ಹವಾಮಾನ ವರದಿ; ಇಂದು ಉತ್ತರ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭರ್ಜರಿ ಮಳೆ!

ಇಂದು ಉತ್ತರ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭರ್ಜರಿ ಮಳೆ!

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮುಖ್ಯವಾಗಿ ಸ್ಪಷ್ಟ ಆಕಾಶ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 ° C ಮತ್ತು 23 ° C ಆಗಿರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

Begane Ramaiah: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನ

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನ

Begane Ramaiah: ಮಾಜಿ ಸಚಿವ ಬೇಗಾನೆ ರಾಮಯ್ಯ ಅವರು, ಇಂದಿರಾ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಇವರು 1972ರಲ್ಲಿ ನರಸಿಂಹರಾಜಪುರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದರು. 1978ರಲ್ಲಿ ಶೃಂಗೇರಿ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಮೊದಲ ಪ್ರಯತ್ನದಲ್ಲೇ ಗೆದ್ದಿದ್ದರು.

Fraud case: ಚಿನ್ನ ಖರೀದಿಸಿ ವಂಚನೆ ಪ್ರಕರಣ: ಐಶ್ವರ್ಯ ಗೌಡ ಇಡಿ ವಶಕ್ಕೆ

ಚಿನ್ನ ಖರೀದಿಸಿ ವಂಚನೆ ಪ್ರಕರಣ: ಐಶ್ವರ್ಯ ಗೌಡ ಇಡಿ ವಶಕ್ಕೆ

Fraud case: ಐಶ್ವರ್ಯ ಗೌಡ ಅವರ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಮನೆ, ಬೆಂಗಳೂರಿನ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಜೀನಿ ಮಾಲೀಕನ ವಿರುದ್ಧ ಲೈಂಗಿಕ ಕಿರುಕುಳ ದೂರು; ಆರೋಪ ನಿರಾಕರಿಸಿದ ದಿಲೀಪ್‌ ಕುಮಾರ್

ಲೈಂಗಿಕ ಕಿರುಕುಳ ಆರೋಪ ನಿರಾಕರಿಸಿದ ಜೀನಿ ಸಂಸ್ಥೆ ಮಾಲೀಕ

Physical abuse: ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೀನಿ ಸಂಸ್ಥೆಯ ಮಾಲೀಕ ದಿಲೀಪ್‌ಕುಮಾರ್ ಅವರು, ತಾನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಜನಪ್ರಿಯತೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ನನಗೆ ತೊಂದರೆ ನೀಡಿ, ಜೀನಿ ಸಂಸ್ಥೆಗೆ ಕೆಟ್ಟ ಹೆಸರು ತರಲು ಹಲವರು ಯತ್ನಿಸುತ್ತಿರುತ್ತಾರೆ ಎಂದು ಆರೋಪಿಸಿದ್ದಾರೆ.

Karnataka Weather: ಯೆಲ್ಲೋ ಅಲರ್ಟ್‌; ಏ.27ರವರೆಗೆ ರಾಜ್ಯದಲ್ಲಿ ಮುಂದುವರಿಯಲಿದೆ ಮಳೆಯಾರ್ಭಟ

ಏ.27ರವರೆಗೆ ರಾಜ್ಯದಲ್ಲಿ ಮುಂದುವರಿಯಲಿದೆ ಮಳೆಯಾರ್ಭಟ

Karnataka Weather: ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕದ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಉತ್ತರ ಒಳನಾಡಿನಲ್ಲಿ 2-4 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಳವಾಗಲಿದೆ. ಮುಂದಿನ 3 ದಿನಗಳವರೆಗೆ ದಕ್ಷಿಣ ಒಳನಾಡಿನಲ್ಲಿ 2-3 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Male Mahadeshwara Hills: ಮಲೆ ಮಹದೇಶ್ವರ ಲಾಡು ಪ್ರಸಾದಕ್ಕೆ ತಿರುಪತಿ ಮಾದರಿಯಲ್ಲಿ ನಂದಿನಿ ತುಪ್ಪ ಬಳಕೆ

ಮಲೆ ಮಹದೇಶ್ವರ ಲಾಡು ಪ್ರಸಾದಕ್ಕೆ ನಂದಿನಿ ತುಪ್ಪ ಬಳಕೆ

Male Mahadeshwara Hills: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ನಡೆದ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮಲೆ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ, ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸಲು ತೀರ್ಮಾನಿಸಲಾಗಿದೆ.

Male Mahadeshwara Hills: ಮಲೆ ಮಹದೇಶ್ವರ ಬೆಟ್ಟ ಇನ್ನುಮುಂದೆ ಪಾನ ಮುಕ್ತ: ಸಿಎಂ ಘೋಷಣೆ

ಮಲೆ ಮಹದೇಶ್ವರ ಬೆಟ್ಟ ಇನ್ನುಮುಂದೆ ಪಾನ ಮುಕ್ತ: ಸಿಎಂ ಘೋಷಣೆ

Male Mahadeshwara Hills: ಇಲ್ಲಿಯವರೆಗೂ ಮಹದೇಶ್ವರ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

Cabinet meeting: ಮೈಸೂರಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ; 3647 ಕೋಟಿ ರೂ. ಕಾಮಗಾರಿಗಳಿಗೆ ಸಂಪುಟ ಒಪ್ಪಿಗೆ

ಮೈಸೂರಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ ನೀಡಲು ಸಂಪುಟ ಒಪ್ಪಿಗೆ

Cabinet meeting: ಬೆಂಗಳೂರು ಕೇಂದ್ರಿತ ಆಡಳಿತ ಮಾದರಿಗೆ ಬದಲಾಗಿ ಕರ್ನಾಟಕದ ವಿಕೇಂದ್ರೀಕೃತ ಆಡಳಿತ ಮಾದರಿಯನ್ನು ಅಳವಡಿಸಿಕೊಳ್ಳಲು ಉದ್ದೇಶಿಸಿದೆ. ಮುಂದಿನ ದಿನಗಳಲ್ಲಿ ಬೆಳಗಾವಿ ವಿಭಾಗದ ಸಂಪುಟ ಸಭೆ ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Cabinet meeting: ಉಗ್ರವಾದವನ್ನು ಬುಡಸಮೇತ ಕಿತ್ತು ಹಾಕಬೇಕು; ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಖಂಡನಾ ನಿರ್ಣಯ

ಉಗ್ರರ ದಾಳಿ ಕುರಿತು ಕ್ಯಾಬಿನೆಟ್‌ ಸಭೆಯಲ್ಲಿ ಖಂಡನಾ ನಿರ್ಣಯ

Cabinet meeting: ಉಗ್ರರ ದಾಳಿ ಕುರಿತು ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಗಿದೆ. ಈ ಘಟನೆಗೆ ಕಾರಣವಾಗಿರುವ ವೈಫಲ್ಯಗಳ ಕುರಿತು ಸಮರ್ಥವಾಗಿ ಮತ್ತು ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಲು ಸಚಿವ ಸಂಪುಟ ನಿರ್ಧರಿಸಿದೆ.

Pahalgam terror attack: ಉಗ್ರರ ದಾಳಿ; ಮೃತ ಕನ್ನಡಿಗರ ಕುಟುಂಬಕ್ಕೆ ಮಂತ್ರಾಲಯ ಮಠದಿಂದ ತಲಾ 1 ಲಕ್ಷ ಪರಿಹಾರ

ಮೃತ ಕನ್ನಡಿಗರ ಕುಟುಂಬಕ್ಕೆ ಮಂತ್ರಾಲಯ ಮಠದಿಂದ 1 ಲಕ್ಷ ಪರಿಹಾರ

Pahalgam terror attack: ಉಗ್ರರ ದಾಳಿಯಲ್ಲಿ ಕನ್ನಡಿಗರಾದ ಮಂಜುನಾಥ್ ರಾವ್, ಭರತ್ ಭೂಷಣ್ ಹಾಗೂ ಆಂಧ್ರ ಮೂಲದ ಬೆಂಗಳೂರು ನಿವಾಸಿ ಮಧುಸೂಧನ್ ಮೃತಪಟ್ಟಿದ್ದರು. ಇವರ ಕುಟುಂಬಕ್ಕೆ ಮಂತ್ರಾಲಯ ಮಠದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ಪರಿಹಾರ ಘೋಷಿಸಿದ್ದಾರೆ.

Rahul gandhi: ರಾಹುಲ್‌ ಗಾಂಧಿ ಕುರಿತು ಅವಹೇಳನಕಾರಿ ಪೋಸ್ಟ್‌; ರಾಜ್ಯ ಬಿಜೆಪಿ ಐಟಿ ಸೆಲ್ ವಿರುದ್ಧ ಎಫ್ಐಆರ್

ರಾಹುಲ್‌ ಗಾಂಧಿ ವಿರುದ್ಧ ಪೋಸ್ಟ್; ಬಿಜೆಪಿ ಐಟಿ ಸೆಲ್ ವಿರುದ್ಧ ಎಫ್ಐಆರ್

Rahul gandhi: ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗ ಉಗ್ರರ ದಾಳಿ ನಡೆಯುತ್ತದೆ. ಪ್ರತಿ ಬಾರಿ ವಿದೇಶಕ್ಕೆ ಹೋದಾಗ ಈ ರೀತಿಯ ಕೃತ್ಯ ನಡೆದಿರುತ್ತದೆ ಎಂದು ಬಿಜೆಪಿ ಅವಹೇಳನ ಮಾಡಿದೆ ಎಂದು ದೂರು ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಬಿಜೆಪಿ ಐಟಿ ಸೆಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

CM Siddaramaiah: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸಿಎಂ ಸೂಚನೆ

ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಸಿಎಂ ಸೂಚನೆ

CM Siddaramaiah: ವಿದೇಶದವರ ಬಗ್ಗೆ ಕಣ್ಗಾವಲು ಇರಿಸಲು ಕೇಂದ್ರ ಗೃಹ ಸಚಿವರು ಸೂಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಉಗ್ರರು ಯಾವುದೇ ಧರ್ಮ ಜಾರಿಗೆ ಸೇರಿರಲಿ ಅವರೆಲ್ಲರನ್ನೂ ಮಟ್ಟ ಹಾಕಬೇಕಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಅದಕ್ಕೆ ಬೇಕಾಗಿರುವ ಎಲ್ಲಾ ಸಹಕಾರ, ಬೆಂಬಲವನ್ನು ನಾವು, ನಮ್ಮ ಸರ್ಕಾರ, ಪಕ್ಷ ಕೊಡುತ್ತದೆ ಎಂದು ತಿಳಿಸಿದ್ದಾರೆ.

Car Accident: ಅಫಜಲಪುರದಲ್ಲಿ ಭೀಕರ ಕಾರು ಅಪಘಾತ; 2 ವರ್ಷದ ಮಗು ಸೇರಿ ಮೂವರ ದುರ್ಮರಣ

ಅಫಜಲಪುರದಲ್ಲಿ ಭೀಕರ ಕಾರು ಅಪಘಾತ; ಮೂವರ ದುರ್ಮರಣ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬುರು ಗ್ರಾಮದ ಬಳಿ ಅಪಘಾತ ನಡೆದಿದೆ. ರಸ್ತೆ ಮೇಲೆ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಲ್ಲಿನ ಕಂಬಗಳಿಗೆ ವಾಹನ ಡಿಕ್ಕಿ ಹೊಡೆದು ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ.

Karnataka Weather: ಇಂದಿನ ಹವಾಮಾನ; ಹಾಸನ, ಚಿಕ್ಕಮಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

ಇಂದು ಹಾಸನ, ಚಿಕ್ಕಮಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

Karnataka weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್‌ 26ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮುಖ್ಯವಾಗಿ ಸ್ಪಷ್ಟ ಆಕಾಶವಿರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35° C ಮತ್ತು 24° C ಆಗಿರಬಹುದು.

Pahalgam Terror Attack: ಉಗ್ರರ ದಾಳಿಯಿಂದ ಮೃತಪಟ್ಟ ಕನ್ನಡಿಗರ ಮೃತದೇಹ ಬೆಂಗಳೂರಿಗೆ ಬರುವುದು ಯಾವಾಗ?

ಉಗ್ರರ ದಾಳಿಯಿಂದ ಮೃತಪಟ್ಟ ಕನ್ನಡಿಗರ ಮೃತದೇಹ ಬೆಂಗಳೂರಿಗೆ ಬರುವುದು ಯಾವಾಗ?

Pahalgam Terror Attack: ಪ್ರವಾಸಕ್ಕೆಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ತೆರಳಿದ್ದಾಗ ಟಿಆರ್​ಎಫ್ ಉಗ್ರರು ಮಂಗಳವಾರ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಶಿವಮೊಗ್ಗದ ಮಂಜುನಾಥ್‌ ರಾವ್‌ ಹಾಗೂ ಬೆಂಗಳೂರಿನ ಭರತ್ ಭೂಷಣ್ ಮೃತಪಟ್ಟಿದ್ದರು. ಇವರ ಮೃತದೇಹಗಳನ್ನು ಬೆಂಗಳೂರಿಗೆ ತರಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ.