ತೇಜಸ್ವಿಯೇ ಸಿಎಂ ಅಭ್ಯರ್ಥಿ; ಅಧಿಕೃತ ಘೋಷಣೆ
Tejashwi Yadav:ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಶಕ್ತಿ ಪ್ರದರ್ಶನಕ್ಕೆ ಮುಂದಾದ ಮಹಾಘಟಬಂಧನ್ ನಾಯಕರು ಗುರುವಾರ ತಮ್ಮ ಮೊದಲ ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಿ, ಆಡಳಿತಾರೂಢ NDA ವಿರುದ್ಧ ಒಗ್ಗಟ್ಟಿನ ಸಂದೇಶವನ್ನು ರವಾನಿಸಿದರು. ಆರ್‌ಜೆಡಿ, ಕಾಂಗ್ರೆಸ್ ಮತ್ತು ಎಡ ಪಕ್ಷಗಳ ಪ್ರಮುಖ ನಾಯಕರು ಭಾಗವಹಿಸಿದ್ದ ಈ ಪತ್ರಿಕಾಗೋಷ್ಠಿಯು, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ವಿರೋಧ ಪಕ್ಷದ ಒಮ್ಮತದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಾಯ್ತು