ಮೊದಲ ಎಸೆತದಲ್ಲಿಯೇ ವಿಕೆಟ್ ಕಿತ್ತು ಅಪರೂಪದ ದಾಖಲೆ ಬರೆದ ಶಮಿ!
Mohammed Shami creates history: ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಅಪರೂಪದ ದಾಖಲೆಯನ್ನು ಬರೆದಿದ್ದಾರೆ. ನಾಲ್ಕನೇ ಬಾರಿ ಐಪಿಎಲ್ ಇನಿಂಗ್ಸ್ನ ಮೊದಲ ಎಸೆತದಲ್ಲಿಯೇ ವಿಕೆಟ್ ಪಡೆದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.