ಈ ತಾಕತ್ತನ್ನು ಸರಿಯಾಗಿ ಬಳಸಿಕೊಳ್ಳಬೇಕಿದೆ !
ಒಂದು ದೇಶ, ಭಾಷೆಯ ಬಗ್ಗೆ ಇರುವ ಭಾವನೆಯನ್ನು ಬದಲಾಯಿಸುವ ತಾಕತ್ತು ಅದಕ್ಕಿದೆ. ಇದನ್ನ ಸರಿದಾರಿಯಲ್ಲಿ ಬಳಸುವ ಜವಾಬ್ದಾರಿ ಎಲ್ಲರ ಮೇಲಿದೆ. ಹೀಗೆ ಭಾರತೀಯ ಚಿತ್ರಗಳನ್ನ ಸ್ಪ್ಯಾನಿಷ್ ಸಬ್ಟೈಟ್ಲ್ಗಳಲ್ಲಿ ನೋಡಿದ ತೊಮಿ, ಒಂದಲ್ಲ ಎರಡು ಬಾರಿ ಭಾರತಕ್ಕೆ ಭೇಟಿ ಕೊಟ್ಟ. ನಾವೆಲ್ಲಾ ಇಲ್ಲಿನ ವ್ಯವಸ್ಥೆಯನ್ನು ಹಳಿದುಕೊಂಡು ತಿರುಗಾಡುತ್ತಿದ್ದರೆ, ಅವನ ಕಣ್ಣಿಗೆ ಇದು ಸ್ವರ್ಗವಾಗಿ ಕಂಡಿತ್ತು.