ವಿಜಯಪುರದಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ
Self Harming: ತಲೆಗೆ ಗುಂಡು ಹಾರಿಸಿಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ನಗರದ ಶಿಕಾರಿ ಖಾನ ಪ್ರದೇಶದಲ್ಲಿ ಜರುಗಿದೆ. ಅಶನಾಮ್ ಪ್ರಕಾಶ ಮಿರ್ಜಿ (22) ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಬಸವರಾಜ್ ಯಲಿಗಾರ್, ಸಿಪಿಐ ಮಲ್ಲಯ್ಯ ಮಠಪತಿ ಹಾಗೂ ಎಪಿಎಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.