ಬಹುಕೋಟಿ ವಂಚನೆ ಪ್ರಕರಣ; ಇಬ್ಬರು ಖ್ಯಾತ ನಟರ ಮೇಲೆ ಪ್ರಕರಣ ದಾಖಲು
Celebrity Scam: ಇತ್ತೀಚಿಗೆ ವಂಚನೆ ಪ್ರಕರಣಗಳು ಜಾಸ್ತಿ ಆಗುತ್ತಿದ್ದು, ಕೆಲ ದಿನಗಳ ಹಿಂದೆಯಷ್ಟೇ ಬೆಂಗಳೂರಿನಲ್ಲಿ 139 ಕಿರುತೆರೆ ನಟ-ನಟಿಯರಿಗೆ ಸೈಟ್ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ ಪ್ರಕರಣದ ಆರೋಪದ ಮೇಲೆ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಅಲ್ಲದೇ ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆಯ ಆರೋಪದ ಮೇಲೆ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಬಾಲಿವುಡ್ ನಟರಾದ ಆಲೋಕ್ ನಾಥ್ ಮತ್ತು ಶ್ರೇಯಸ್ ತಲ್ಪಡೆ ಮೇಲೆಯೂ ಇಂತದೇ ಆರೋಪ ಕೇಳಿ ಬಂದಿದ್ದು, ಇವರಿಬ್ಬರು ಸೇರಿದಂತೆ ಒಟ್ಟು 22 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.