37 ವರ್ಷಗಳ ಬಳಿಕ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯ ಬಂಧನ
ಸುಮಾರು 37 ವರ್ಷಗಳ ಹಿಂದೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯೊಬ್ಬನನ್ನು ಇದೀಗ ಮಧ್ಯಪ್ರದೇಶದಲ್ಲಿ ಬಂಧಿಸಲಾಗಿದೆ. ಆಸಿಡ್ ದಾಳಿ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿ ಸಾಧುವಿನ ವೇಷದಲ್ಲಿ ತಲೆ ಮರೆಸಿಕೊಂಡಿದ್ದನು. ಆತನನ್ನು ಶಿವಪುರಿ ಜಿಲ್ಲೆಯ ಗಾಯತ್ರಿ ಶಕ್ತಿಪೀಠದಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ.