ಡಿ.13ರವರೆಗೆ ಬೆಳಗಾವಿ ಸೇರಿ 7 ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ
ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿಯ ತೀವ್ರತೆ ಹೆಚ್ಚಾಗುತ್ತಿದೆ. ಕರ್ನಾಟಕದ ಸಮತಟ್ಟಾದ ಪ್ರದೇಶಗಲ್ಲಿ ಬೀದರ್ನಲ್ಲಿ ಗುರುವಾರ ಮುಂಜಾನೆ ಅತಿ ಕನಿಷ್ಠ ತಾಪಮಾನ 9 ಡಿಗ್ರಿ ಸೆ. ದಾಖಲಾಗಿದೆ. ಇನ್ನು ಮುಂದಿನ ಎರಡು ದಿನ ರಾಜ್ಯದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಶೀತ ಗಾಳಿ ಬೀಸುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಹವಾಮಾನ ಇಲಾಖೆ ತಿಳಿಸಿದೆ.