About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ
Trending

ಬೆಂಗಳೂರಿಗೆ ತಟ್ಟಿದ ರೈತರ ಪ್ರತಿಭಟನೆ ಬಿಸಿ: ವಿಧಾನಸೌಧ ಮುತ್ತಿಗೆಗೆ ನಿರ್ಧಾರ

ಬೆಂಗಳೂರು: ಕಬ್ಬು ಬಾಕಿ ಪಾವತಿ, ಸಾಲಮನ್ನಾಕ್ಕೆ ಆಗ್ರಹಿಸಿ ಹೋರಾಟಕ್ಕಾಗಿ ವಿವಿಧ ಜಿಲ್ಲೆಗಳಿಂದ ರೈತರು ಬೆಂಗಳೂರಿಗೆ ಬಂದಿಳಿದಿದ್ದು, ರೈತಸಂಘದ ನೇತೃತ್ವದಲ್ಲಿ ಇಂದು ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.

ರಾಜ್ಯದ ಮೂಲೆ ಮೂಲೆಯಿಂದ ಸುಮಾರು 25 ಸಾವಿರ ರೈತರು ಬೆಂಗಳೂರಿಗೆ ಬರುವ ಸಾಧ್ಯತೆ ಇದ್ದು, ರೈತ ಸಂಘಟನೆ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಹೀಗಾಗಿ ಇಂದು ಬೆಂಗಳೂರಲ್ಲಿ ರೈತರ ಹಸಿರು ಹೋರಾಟ ಜೋರಾಗುವ ಸಾಧ್ಯತೆಗಳಿವೆ.

ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ರೈತರೆಲ್ಲರೂ ಫ್ರೀಡಂ ಪಾರ್ಕಿಗೆ ಬರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ ಫ್ರೀಡಂ ಪಾರ್ಕ್​ನಲ್ಲಿ ಒಂದು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಫ್ರೀಡಂ ಪಾರ್ಕ್​ನಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ರೈತರು ನಿರ್ಧರಿಸಿದ್ದಾರೆ. ರೈತರನ್ನು ಫ್ರೀಡಂ ಪಾರ್ಕ್​ನಲ್ಲಿಯೇ ತಡೆ ಹಿಡಿಯಲು ಪೊಲೀಸರು ಎಲ್ಲ ವ್ಯವಸ್ಥೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಬೆಳಗಾವಿಯ ಖಾನಾಪುರದ ರೈತ ಮಹಿಳೆಯ ಬಗ್ಗೆ ಸಿಎಂ ಹಗುರ ಮಾತು ಹಾಗೂ ರೈತ ಅಶೋಕ್ ಯಮಕನಮರಡಿ ಮೇಲೆ ಪೊಲೀಸರ ಹಲ್ಲೆಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ಖಾನಾಪುರ ಹಾಗೂ ಅಥಣಿಯ ಐನಾಪುರ ಬಂದ್‍ಗೆ ಕರೆ ನೀಡಲಾಗಿದೆ.

ರೈತರ ಪ್ರತಿಭಟನೆಗೆ ಕೊನೆಗೂ ಮಣಿದ ಸಿಎಂ

ಇನ್ನು ಬೆಳಗಾವಿಯ ಕಬ್ಬು ಹೋರಾಟಗಾರರ ಪ್ರತಿಭಟನೆಗೆ ಕೊನೆಗೂ ಸಿಎಂ ಕುಮಾರಸ್ವಾಮಿ ಮಣಿದಿದ್ದಾರೆ. ಹೋರಾಟದ ಫಲವಾಗಿ ಸಿಎಂ ಕುಮಾರಸ್ವಾಮಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ಮುಖಂಡರ ಸಭೆ ಕರೆದಿದ್ದಾರೆ. ನಾಳೆ ವಿಧಾನಸೌಧದಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ನಡೆಯಲಿದೆ. ರೈತರು ನಾಳೆ ಸಿಎಂ ಕುಮಾರಸ್ವಾಮಿ ಕರೆದಿರುವ ಸಭೆಯಲ್ಲಿ ಭಾಗಿಯಾಗಲು ಸಮ್ಮತಿಸಿದ್ದಾರೆ.

ರೈತರ ತೀವ್ರ ಹೋರಾಟದ ನಡುವೆಯೇ ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ವಿಧಾನಸೌಧದಲ್ಲಿ ಮಧ್ಯಾಹ್ನ 12.30ಕ್ಕೆ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಬೆಳಗಾವಿ ರೈತ ಹೋರಾಟವೇ ಪ್ರಮುಖವಾಗಿ ಚರ್ಚೆಯಾಗುವ ಸಾಧ್ಯತೆ ಇದೆ. ರೈತರಿಗೆ ಕಬ್ಬು ಬಾಕಿ ಕೊಡಿಸುವ ಕುರಿತು ಸಭೆಯಲ್ಲಿ ಮಹತ್ವ ನಿರ್ಧಾರವನ್ನ ಸರ್ಕಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

Tags

Related Articles

Leave a Reply

Your email address will not be published. Required fields are marked *

Language
Close