ಬೆಂಗಳೂರು-ಮೈಸೂರು ನಡುವಿನ 6 ಪಥದ ರಸ್ತೆ ನಿರ್ಮಾಣ ಕಾಮಗಾರಿ

Posted In : ಬೆಂಗಳೂರು, ರಾಜ್ಯ

ಬೆಂಗಳೂರು: 'ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಗೆ ಟೆಂಡರ್ ಕರೆಯಲು ಕೇಂದ್ರ ಸರ್ಕಾರಕ್ಕೆ ಕೋರಿದ್ದು, ಈ ಪ್ರಕ್ರಿಯೆ ಶೀಘ್ರದಲ್ಲಿಯೇ ನಡೆಯಲಿದೆ' ಎಂದು ಶುಕ್ರವಾರ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

 ಬಹುನಿರೀಕ್ಷಿತ ಬೆಂಗಳೂರು-ಮೈಸೂರು ನಡುವಿನ 6 ಪಥದ ರಸ್ತೆ ನಿರ್ಮಾಣ ಕಾಮಗಾರಿ ನವೆಂಬರ್‌ನಲ್ಲಿ ಆರಂಭವಾಗಲಿದ್ದು ಸುಮಾರು 3,750 ಕೋಟಿ ರೂ.ಗಳ ಯೋಜನೆ ಇದಾಗಿದೆ. ಸದ್ಯ, ಸಿದ್ಧಪಡಿಸಿರುವ ಯೋಜನೆಯಂತೆ ಬೆಂಗಳೂರಿನ ಜ್ಞಾನಭಾರತಿ ಜಂಕ್ಷನ್‌ನಿಂದ ಮೈಸೂರಿನ ಕೊಲಂಬಿಯಾ ಆಸ್ಪತ್ರೆ ತನಕ ಒಟ್ಟು 117 ಕಿ.ಮೀ. ಉದ್ದದ ರಸ್ತೆಯನ್ನು ಆರು ಪಥದ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗುತ್ತದೆ.

 ಆರುಪಥದ ರಸ್ತೆ ನಿರ್ಮಿಸುವಾಗ ಬಿಡದಿ, ರಾಮನಗರ, ಚನ್ನಪಟ್ಟಣ, ಮಂಡ್ಯ ಮತ್ತು ಶ್ರೀರಂಗಪಟ್ಟಣದಲ್ಲಿ ಬೈಪಾಸ್ ನಿರ್ಮಾಣ ಮಾಡಲಾಗುತ್ತದೆ. ಮದ್ದೂರು ಸಮೀಪ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತದೆ. 

6 ಪಥದ ರಸ್ತೆ ನಿರ್ಮಾಣ ಕಾಮಗಾರಿಯ ಯೋಜನೆಯಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ. ಮೊದಲು ಜ್ಞಾನಭಾರತಿ ಜಂಕ್ಷನ್‌ನಿಂದ ನೈಸ್ ರಸ್ತೆ ವರೆಗೆ ಫ್ಲೈ ಓವರ್ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಅಲ್ಲಿ ನಮ್ಮ ಮೆಟ್ರೋ ಮೇಲ್ಸೇತುವೆ ಬರುವುದರಿಂದ ಆ ಯೋಜನೆಯನ್ನು ಕೈಬಿಡಲಾಗಿದೆ. ಎಂದು ವಿವರಣೆ ನೀಡಿದರು.

 

Leave a Reply

Your email address will not be published. Required fields are marked *

four × one =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top