ಮೇ 30 ಹಾಗೂ 31 ರಂದು ಅಖಿಲ ಭಾರತ ಬ್ಯಾಂಕ್ ಮುಷ್ಕರ

Posted In : ದೇಶ, ರಾಜ್ಯ

ಬೆಂಗಳೂರು: ವೇತನ ಪರಿಷ್ಕರಣೆ ಸಹಿತ ಹಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಮೇ. 30 ಹಾಗೂ 31ಕ್ಕೆ ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಕರೆಕೊಟ್ಟಿದೆ.

ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಜೊತೆಗೆ ಹಲವು ಬಾರಿ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಹೀಗಾಗಿ ಸರ್ಕಾರ ಮಧ್ಯಪ್ರವೇಶ ಮಾಡಿ ವೇತನ ಪರಿಷ್ಕರಣೆ ಮಾಡಬೇಕೆಂದು ಒತ್ತಾಯ ಮಾಡಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಹಾಗಾಗಿ ನೌಕರರ 9ಯೂನಿಯನ್ ಗಳು ಸೇರಿ ಮುಷ್ಕರಕ್ಕೆ ಕರೆ ಕೊಟ್ಟಿದೆ ಎಂದು ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ನೌಕರರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ಮೇ 30 ಹಾಗೂ 31 ರಂದು ಬ್ಯಾಂಕ್ ಮುಷ್ಕರ ನಡೆಯಲಿದ್ದು, ಬೆಳಗ್ಗೆ 10-30ಕ್ಕೆ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ. ಸುಮಾರು 10ಲಕ್ಷಕ್ಕೂ ಹೆಚ್ಚು ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದು, ಪ್ರತೀ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ.

Leave a Reply

Your email address will not be published. Required fields are marked *

11 − 8 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top