ಕೇಂದ್ರ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ: ಹೆಬ್ಬಾಳ್ಕರ್
Laxmi Hebbalkar: ಕೇಂದ್ರ ಸರ್ಕಾರ ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ದರವನ್ನು ಏರಿಕೆ ಮಾಡಿ, ಬಡವರ ರಕ್ತ ಹೀರುವ ಕೆಲಸ ಮಾಡುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.