About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಡಿಸೆಂಬರ್ ಅಂತ್ಯಕ್ಕೆ ಇನ್ನಷ್ಟು ಬರಪೀಡಿತ ತಾಲೂಕುಗಳ ಘೋಷಣೆ: ಸಿಎಂ ಕುಮಾರಸ್ವಾಮಿ

ಬೆಳಗಾವಿ (ಸುವರ್ಣಸೌಧ): ರಾಜದಲ್ಲಿ 100 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಇನ್ನಷ್ಟು ತಾಲೂಕುಗಳು ಬರಪೀಡಿತವಾಗಿದ್ದು, ಹಿಂಗಾರು ಮಳೆ ಕೊರತೆಯನ್ನು ಆಧರಿಸಿ ಅವುಗಳ ಬಗ್ಗೆ ಅಧ್ಯಯನ ನಡೆಯುತ್ತಿದೆ. ಡಿಸೆಂಬರ್ ಅಂತ್ಯಕ್ಕೆ ಇನ್ನಷ್ಟು ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡು ವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು.

ವಿಧಾನಸಭೆಯಲ್ಲಿ ಬರಪೀಡಿತ ತಾಲೂಕುಗಳ ಬಗ್ಗೆ ಸುದೀರ್ಘವಾಗಿ ನಡೆದ ಚರ್ಚೆಗೆ ಇಂದು ಸರ್ಕಾರದ ಪರವಾಗಿ ಉತ್ತರ ನೀಡಿದ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಮಾಹಿತಿ ನೀಡಿದರು. ಇದಕ್ಕೆ ಕೆಲ ಶಾಸಕರು ತಮ್ಮ ಕ್ಷೇತ್ರಗಳಲ್ಲೂ ಬರ ಇದ್ದು, ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಆಗ ಉತ್ತರ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಬರಪರಿಸ್ಥಿತಿ ಬಗ್ಗೆ 9 ಗಂಟೆ ಚರ್ಚೆಯಾಗಿದೆ. ನಾನು ಇಲ್ಲಿ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿದ್ದೇನೆ. ನಿಮ್ಮ ಬೇಡಿಕೆ ಏನೆಂಬುದು ನನಗೆ ಅರ್ಥವಾಗಿದೆ. ಮುಂಗಾರು ಮಳೆ ಕೊರತೆಯಿಂದಾಗಿ 100 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದೇವೆ. ಹಿಂಗಾರು ಮಳೆಯೂ ಕೈಕೊಟ್ಟಿದೆ. ಬಹಳಷ್ಟು ಕ್ಷೇತ್ರಗಳು ತೊಂದರೆಗೆ ಸಿಲುಕಿವೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮತ್ತಷ್ಟು ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗುವುದು ಎಂದು ಹೇಳಿದರು.

Tags

Related Articles

Leave a Reply

Your email address will not be published. Required fields are marked *

Language
Close