About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಬೀದಿ ನಾಯಿಗಳ ದಾಳಿಗೆ ತುತ್ತಾಗಿದ್ದ ಬಾಲಕ ಸಾವು

ಬೆಂಗಳೂರು: ಬೀದಿ ನಾಯಿಗಳ ದಾಳಿಗೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾನೆ.

ಆಗಸ್ಟ್‌ 30ರಂದು ಬೀದಿನಾಯಿಗಳ ದಾಳಿಯಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ 10 ವರ್ಷದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಎರಡು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿನ್ನೆ ರಾತ್ರಿ ಸುಮಾರು 9.30 ರ ವೇಳೆಗೆ ಬಾಲಕ ಕೊನೆಯುಸಿರೆಳೆದಿದ್ದಾನೆ.

ಬೌರಿಂಗ್ ಆಸ್ಪತ್ರೆಯಲ್ಲಿ ಬಾಲಕನ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದಿದ್ದು, ಶವವನ್ನು ಪಾಲಕರಿಗೆ ಹಸ್ತಾಂತರಿಸಿದ್ದಾರೆ.

ನಾಯಿ ದಾಳಿಯಿಂದ ಬಿಬಿಎಂಪಿಗೆ ಸಾರ್ವಜನಿಕರು ಹಿಡಿ ಶಾಪ ಹಾಕಿದ್ದು, ಮಗು ಸಾವಿಗೆ ಬಿಬಿಎಂಪಿ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close