About Us Advertise with us Be a Reporter E-Paper

Breaking Newsದೇಶಪ್ರಚಲಿತ
Trending

ದೇಶಾದ್ಯಂತ ಭಾರತ್ ಬಂದ್, ಪ್ರತಿಭಟನೆಗೆ ರಾಹುಲ್ ಸಾಥ್

ದೆಹಲಿ: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸೇರಿ 21 ವಿಪಕ್ಷಗಳು ಕೇಂದ್ರ ಸರಕಾರದ ವಿರುದ್ಧ ಇಂದು ಭಾರತ್ ಬಂದ್ ಗೆ ಕರೆ ಕೊಟ್ಟಿದ್ದು, ದೇಶದಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ರಸ್ತೆಗಿಳಿದು ಪ್ರತಿಭಟಿಸಿದರು.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನಾಕಾರರ ಜತೆ ರಾಹುಲ್ ಹಾಗೂ ವಿಪಕ್ಷಗಳ ನಾಯಕರು ರಾಜ್​ಘಾಟ್​ನಿಂದ ರಾಮ್​ಲೀಲಾ ಮೈದಾನಕ್ಕೆ ಕಾಲ್ನಡಿಗೆಯಲ್ಲೇ ತೆರಳಿದರು.  ರಾಮ್​​ಲೀಲಾ ಮೈದಾ​​ನದಲ್ಲಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಕಾಂಗ್ರೆಸ್​​ ಸೇರಿ ಹಲವು ಪಕ್ಷಗಳ ಕಾರ್ಯಕರ್ತರು, ಬೆಂಬಲಿಗರು ಭಾರತ್​​ ಬಂದ್​ಗೆ ಬೆಂಬಲ ನೀಡಿದ್ದಾರೆ. ಶರದ್ ಪವಾರ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ದೆಹಲಿಯಲ್ಲಿ ಭಾರತ್ ಬಂದ್‍ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರೋಜಿನಿ ಮಾರ್ಕೆಟ್ ವ್ಯಾಪಾರಿಗಳೂ ಬಂದ್‍ಗೆ ಬೆಂಹಲ ಸೂಚಿಸಿದ್ದು, ಪ್ರಮುಖ ಮಾರುಕಟ್ಟೆಗಳೆಲ್ಲ ಖಾಲಿ ಖಾಲಿಯಾಗಿ ಬಿಕೊ ಎನ್ನುತ್ತಿವೆ.

ಇನ್ನು ಕರ್ನಾಟಕ ಹಾಗೂ ಒಡಿಶಾ ಸರಕಾರಗಳು ಬಂದ್ ಕಾರಣ ರಜಾ ಘೋಷಿಸಿವೆ. ಅತ್ತ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ನೇತೃತ್ವದ ಸರಕಾರವು ಮುಷ್ಕರವಿಲ್ಲದೆ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದೆ.

Tags

Related Articles

Leave a Reply

Your email address will not be published. Required fields are marked *

Language
Close