ಬಸವಕಲ್ಯಾಣದಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು
Bidar News: ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ಬಸವೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವ ವೇಳೆ ಭೀಕರ ಅವಘಡ ಸಂಭವಿಸಿದೆ. ರಥ ಎಳೆಯುವ ವೇಳೆ ಆಯಾ ತಪ್ಪಿ ಚಕ್ರಕ್ಕೆ ಸಿಲುಕಿ ಗಾಯಗೊಂಡಿದ್ದ ಧನರಾಜ ಚಾಕೂರೆ (65) ಮೃತಪಟ್ಟಿದ್ದಾರೆ.
ಬಿಸಿಲಿನಿಂದಲೇ ಮಗ ಸಾವನ್ನಪ್ಪಿದ್ದಾನೆ ಎಂದು ತಂದೆ ಲಯಿಕ್ ಅಹ್ಮದ್ ದೂರು ನೀಡಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಿಸಿಲು ಅತ್ಯಧಿಕವಾಗಿರುವ ಹೊತ್ತಿನಲ್ಲಿ ಹೊರಗೆ ಹೋಗದಂತೆ, ಹೋಗಲೇಬೇಕಾದ ಪರಿಸ್ಥಿತಿಯಲ್ಲಿ ತಲೆ ಹಾಗೂ ಮುಖವನ್ನು ಬಟ್ಟೆಯಿಂದ ಕವರ್ ಮಾಡಿಕೊಳ್ಳುವಂತೆ, ಹಾಗೂ ಸಾಕಷ್ಟು ನೀರು ಸೇವಿಸಿ ಹೈಡ್ರೇಟ್ ಆಗಿರುವಂತೆ ತಜ್ಞರು ಸೂಚಿಸಿದ್ದಾರೆ.
ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಬಹುತೇಕ ಶುಭ್ರ ಆಕಾಶ, ಸಂಜೆಯ ಹೊತ್ತಿಗೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37°C ಮತ್ತು 24°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
CM Siddaramaiah: ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರಿಯುತ್ತದೆ. ಅದು ಮುಂದುವರಿಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ಹವಾಮಾನ ವರದಿ: ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ. ಸಂಜೆ / ರಾತ್ರಿಯ ವೇಳೆಗೆ ಕೆಲವು ಪ್ರದೇಶಗಳಲ್ಲಿ, ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಅನಿಷ್ಕಾರ್ ಅವರು ಬಿರಿಮ್ಸ್ ಕಾಲೇಜಿನ ಹಾಸ್ಟೆಲ್ ಕಟ್ಟಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೈದ್ಯಕೀಯ ಶಿಕ್ಷಣದ ಅಂತಿಮ ಘಟ್ಟದಲ್ಲಿದ್ದ ಇವರು, ಇನ್ನೇನು ಕೆಲವೇ ದಿನಗಳಲ್ಲಿ ವೈದ್ಯರಾಗಿ ಸಮಾಜದ ಸೇವೆಗೆ ಸಿದ್ಧರಾಗಬೇಕಿತ್ತು. ಆದರೆ ಅನಿಷ್ಕಾರ್ ಅವರ ಈ ಅಕಾಲಿಕ ಸಾವು ಕುಟುಂಬಸ್ಥರು ಹಾಗೂ ಸಹಪಾಠಿಗಳಲ್ಲಿ ತೀವ್ರ ಆಘಾತವನ್ನುಂಟು ಮಾಡಿದೆ.
ಮೃತ ದಂಪತಿಗಳನ್ನು ಬಸವಕಲ್ಯಾಣ ನಗರದ ಖಡಿ ಝಂಡಾ ಕಾಲೋನಿಯ ನಿವಾಸಿ ಸೈಯದ್ ದಸ್ತಗೀರ್ (35) ಮತ್ತು ಅವರ ಪತ್ನಿ ಯಾಸ್ಮೀನ್ ದಸ್ತಗೀರ್ (33) ಎಂದು ಗುರುತಿಸಲಾಗಿದೆ. ತ್ರಿಪುರಾಂತ ಬಳಿಯ ಕಾಲೋನಿಯೊಂದರಲ್ಲಿ ವಾಸಿಸುತ್ತಿದ್ದ ಮೃತರು, ಬೈಕ್ನಲ್ಲಿ ಬಸ್ ನಿಲ್ದಾಣ ಕಡೆಯಿಂದ ಖಡಿ ಝಂಡಾ ಕಾಲೋನಿಯತ್ತ ತೆರಳುತ್ತಿದ್ದಾಗ ಈ ಅವಘಡ ನಡೆದಿದೆ.
ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ಘಟನೆ ನಡೆದಿದೆ. ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಗೆ ಲವ್ ಮಾಡುವಂತೆ ಸಹಪಾಠಿ ಚುಡಾಯಿಸುತ್ತಿದ್ದ. ಪ್ರೀತಿಸುವಂತೆ ಒತ್ತಡ ಹಾಕಿದ್ದರಿಂದ ಶಾಲಾ ಕಟ್ಟಡದ ಮೇಲಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ.
ಕೆಲವು ಹಿಂದೂ ಯುವಕರು ಮುಸ್ಲಿಂ ಮೌಲ್ವಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾದ ವಿಚಾರ ನಗರದಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಇದರಿಂದ ಕೆರಳಿದ ಮುಸ್ಲಿಂ ಸಮುದಾಯದ ಸಾವಿರಾರು ಯುವಕರು ಮತ್ತು ಮುಖಂಡರು ನಗರದ ಗಾಂಧಿ ವೃತ್ತದಲ್ಲಿರುವ ಪೊಲೀಸ್ ಠಾಣೆಯತ್ತ ಧಾವಿಸಿದ್ದಾರೆ. ಠಾಣೆಯ ಮುಂಭಾಗದಲ್ಲಿ ಭಾರಿ ಗದ್ದಲ ಸೃಷ್ಟಿಸಿದ್ದಾರೆ.
ಮಂಠಾಳ ಗ್ರಾಮದ ಶರತ್, ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ನವೋದಯ ವಸತಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡ್ತಿದ್ದ. ನಿನ್ನೆ (ಫೆ.10) ರಾತ್ರಿ ಡೆತ್ ನೋಟ್ ಬರೆದಿಟ್ಟು ಶರತ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಾಸ್ಟೆಲ್‌ನಲ್ಲೇ ರಾತ್ರಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿದೆ.
ಬೀದರ್ ಜಿಲ್ಲೆಯ ಔರಾದ ತಾಲೂಕಿನ ಜಮಲಾಪುರ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಸುಮಾರು 50 ಮಕ್ಕಳು ಅಸ್ವಸ್ಥಗೊಂಡ ಘಟನೆ ಮಂಗಳವಾರ ಜರುಗಿದೆ. ಬಿಸಿಯೂಟ ಸೇವಿಸಿದ ಬಳಿಕ ಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಔರಾದ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂವರ ಮುಖ, ಮೈ, ಕೈ ಸುಟ್ಟಿದ್ದು ಎಲ್ಲರನ್ನೂ ಬ್ರೀಮ್ಸ್ ಆಸ್ಪತ್ರೆ ದಾಖಲಿಸಲಾಗಿದೆ. ಅನ್ವರ್ ಪಷಾ ಎಂಬ ಯುವಕನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗೆ ಹೈದ್ರಾಬಾದ್‌ಗೆ ರವಾನೆ ಮಾಡಲಾಗಿದೆ. ವಸ್ತು ಬ್ಲಾಸ್ಟ್ ಆದಾಗ ಪಕ್ಕದಲ್ಲೇ ಆರು ಜನ ಮಕ್ಕಳು ಮತ್ತು ಇಬ್ಬರು ಯುವರು ನಿಂತಿದ್ದರು ಎಂದು ತಿಳಿದು ಬಂದಿದೆ.
ಕಲ್ಯಾಣ ಕರ್ನಾಟಕದ ಧೀಮಂತ ನಾಯಕ, ಸಹಕಾರಿ ಧುರೀಣ, ವೀರಶೈವ ಲಿಂಗಾಯತ ಸಮುದಾಯದ ಹಿರಿಯ ಮುಖಂಡ, ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ಶುಕ್ರವಾರ ರಾತ್ರಿ 10.50ರ ಹೊತ್ತಿಗೆ ಲಿಂಗೈಕ್ಯರಾಗಿದ್ದರು. ಕಳೆದ 10-12 ದಿನಗಳಿಂದ ವಯೋಸಹಜವಾದ ಕಾಯಿಲೆ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೀದರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಭಾಲ್ಕಿಯ ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು. ನಿನ್ನೆ ರಾತ್ರಿ ಕೊನೆಯುಸಿರು ಎಳೆದಿದ್ದರು.
ಶತಾಯುಷಿ ಹಾಗೂ ಕರ್ನಾಟಕದ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರು ಜನವರಿ16 ರಂದು ಕೊನೆಯುಸಿರೆಳೆದಿದ್ದಾರೆ. ಅವರಿಗೆ 103 ವರ್ಷ ವಯಸ್ಸಾಗಿತ್ತು. ಬೀದರ್ ಜಿಲ್ಲೆಯ ಭಾಲ್ಕಿಯ ತಮ್ಮ ಸ್ವಗೃಹದಲ್ಲಿ ಅವರು ಇಹಲೋಕ ತ್ಯಜಿಸಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿಯೂ ಭೀಮಣ್ಣ ಖಂಡ್ರೆ ತಮ್ಮನ್ನು ತೊಡಗಿಸಿಕೊಂಡಿದ್ದರು.
ಕಳೆದ ಒಂದು ವಾರದಿಂದ ನಮ್ಮ ತಂದೆಯವರಾದ ಮಾಜಿ ಸಚಿವರು, ಲೋಕನಾಯಕ ಪೂಜ್ಯ ಡಾ. ಭೀಮಣ್ಣ ಖಂಡ್ರೆ ಅವರು ವಯೋಸಹಜ ಅನಾರೋಗ್ಯದಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. ಇಂದು ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಸುಧಾರಣೆ ಕಂಡು ಬಂದಿದ್ದು, ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.