ತ್ರಿಪುರಾ, ನಾಗಾ ರಾಜ್ಯದಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಗದ್ದುಗೆ

Posted In : ದೇಶ

ಕೊಹಿಮಾ: ತ್ರಿಪುರಾದಲ್ಲಿ ಬಿಜೆಪಿ ಮೈತ್ರಿಕೂಟ ಗಳಿಸಿದ ಸ್ಪಷ್ಟ ಬಹುಮತ ಹಾಗೂ ನಾಗಾಲ್ಯಾಂಡ್ ನಲ್ಲೂ ಎನ್ ಡಿಪಿಪಿ ನೇತೃತ್ವದ ಬಿಜೆಪಿ ಮೈತ್ರಿಕೂಟ ಅಧಿಕಾರದ ಗದ್ದುಗೆಯತ್ತ ದಾಪುಗಾಲಿರಿಸಿದ್ದು, ಅಧಿಕಾರ ಹಿಡಿಯುವತ್ತ ಹೆಜ್ಜೆ ಯಿರಿಸಿದೆ.

ನಾಗಾಲ್ಯಾಂಡ್ ವಿಧಾನಸಭೆಯ 60 ಕ್ಷೇತ್ರಗಳ ಪೈಕಿ ಬಿಜೆಪಿ ಮೈತ್ರಿಕೂಟ ಎನ್ ಡಿಪಿಪಿ 33 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಎನ್ಪಿಎಫ್ ಮೈತ್ರಿಕೂಟ 22 ಸ್ಥಾನಗಳಲ್ಲಿ ಮಾತ್ರ ಮುನ್ನಡೆದಿದೆ. ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಮತ್ತು ಎನ್ ಡಿಪಿಪಿ ಮೈತ್ರಿ ಸರಕಾರ ಬಹುತೇಕ ಖಚಿತವಾಗಿದ್ದು, ಮ್ಯಾಜಿಕ್ ಸಂಖ್ಯೆ 31ನ್ನು ದಾಟಿ ಮುನ್ನುಗ್ಗುತ್ತಿದೆ.

ಕಳೆದ 2013ರ ವಿಧಾನಸಭಾ ಚುನಾವಣೆಯಲ್ಲಿ 38 ಸ್ಥಾನಗಳನ್ನು ಗಳಿಸಿ ಅಧಿಕಾರ ಹಿಡಿದಿದ್ದ ಎನ್ಪಿಎಫ್ ಪಕ್ಷಕ್ಕೆ ಭಾರಿ ಹಿನ್ನಡೆ ಯಾಗಿದೆ. ಈ ಬಾರಿಯ ಕೇವಲ 22 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಿದೆ. 8 ಸ್ಥಾನಗಳಿಸಿದ್ದ ಕಾಂಗ್ರೆಸ್ ಪಕ್ಷ ಈ ಬಾರಿ ಠೇವಣಿ ಕಳೆದುಕೊಂಡಿದ್ದು, ಒಂದೇ ಒಂದು ಸ್ಥಾನವನ್ನೂ ಗೆಲ್ಲದೇ ತೀವ್ರ ಮುಜುಗರಕ್ಕೀಡಾಗಿದೆ. ಇತರರು 5 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

 

Leave a Reply

Your email address will not be published. Required fields are marked *

four + nine =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

Wednesday, 25.04.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ವೈಶಾಖಮಾಸ, ಶುಕ್ಲಪಕ್ಷ, ದಶಮಿ, ಬುಧವಾರ, ನಿತ್ಯನಕ್ಷತ್ರ-ಮಖಾ, ಯೋಗ-ವೃದ್ಧಿ, ಕರಣ-ಗರ

ರಾಹುಕಾಲಗುಳಿಕಕಾಲಯಮಗಂಡಕಾಲ
12.00-1.30 10.30-12.00 7.30-9.00

Read More

 

Wednesday, 25.04.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ವೈಶಾಖಮಾಸ, ಶುಕ್ಲಪಕ್ಷ, ದಶಮಿ, ಬುಧವಾರ, ನಿತ್ಯನಕ್ಷತ್ರ-ಮಖಾ, ಯೋಗ-ವೃದ್ಧಿ, ಕರಣ-ಗರ

ರಾಹುಕಾಲಗುಳಿಕಕಾಲಯಮಗಂಡಕಾಲ
12.00-1.30 10.30-12.00 7.30-9.00

Read More

Back To Top