About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಬಿಜೆಪಿ ಹುಚ್ಚಾಸ್ಪತ್ರೆಯಿದ್ದಂತೆ, ಜೋಶಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಹರಿಪ್ರಸಾದ್

ಹುಬ್ಬಳ್ಳಿ: ಬಿಜೆಪಿ ಹುಚ್ಚಾಸ್ಪತ್ರೆಯಿದ್ದಂತೆ. ಅದರಲ್ಲಿರುವ ಸಂಸದ ಪ್ರಹ್ಲಾದ ಜೋಶಿ ಮೊದಲು ತಪಾಸಣೆ ಮಾಡಿಕೊಂಡು ಗುಣಮುಖರಾಗಲಿ ಎಂದಿರುವ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ಸಮರ್ಥಿಸಿಕೊಂಡು ಬಿಜೆಪಿಯನ್ನು ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಗರು ಹುಚ್ಚರು. ಸಂಸದ ಜೋಶಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಹೀಗಾಗಿ ರಾಹುಲ್ ಗಾಂಧಿಯವರ ಹೇಳಿಕೆಗೆ ಬೇಕಾಬಿಟ್ಟಿಯಾಗಿ ಹೇಳಿಕೆ ನೀಡುತ್ತಿದ್ದಾರೆ. ಕೇಂದ್ರ ಸರಕಾರ ಭೇದ-ಭಾವ ಸೃಷ್ಟಿಸಿ ಉದ್ಯೋಗಾವಕಾಶ ಸಿಗದಂತೆ ಮಾಡಿದೆ.

ನಿರುದ್ಯೋಗಿ ಯುವಕರು ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಇನ್ನು ನಿರುದ್ಯೋಗಿಗಳಿಗೆ ಗೋರಕ್ಷಕರ ಹೆಸರು ಕೊಟ್ಟು ಅವರಿಂದ ಗೂಂಡಾಗಿರಿ ಮಾಡಿಸುತ್ತಿದೆ. ಇದನ್ನೇ ಗಮನದಲ್ಲಿಟ್ಟುಕೊಂಡು ರಾಹುಲ್ ಗಾಂಧಿ ಅವರು ಹೇಳಿಕೆ ನೀಡಿದ್ದು. ಬಿಜೆಪಿ ಇದನ್ನು ತಿರುಚಿ ಬೇಕಾಬಿಟ್ಟಿಯಾಗಿ ಹೇಳಿಕೆ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರಕಾರ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಮಾಡುತ್ತಿದೆ. ಅಧಿಕಾರ ಸಿಕ್ಕಿಲ್ಲ ಎನ್ನುವ ಏಕೈಕ ಕಾರಣಕ್ಕೆ ರಾಜ್ಯ ಸರಕಾರಕ್ಕೆ ನೆರವಾಗುತ್ತಿಲ್ಲ. ವಿವಿಧ ಯೋಜನೆಗಳಲ್ಲಿ ರಾಜ್ಯ ಸರಕಾರಕ್ಕೆ ನೀಡಬೇಕಾದ ಅನುದಾನ ನೀಡುತ್ತಿಲ್ಲ. ಇಂಥ ಕ್ಷುಲ್ಲಕ ರಾಜಕಾರಣವನ್ನು ಕೇಂದ್ರ ಸರಕಾರ ಮಾಡುತ್ತಿರುವುದು ಸರಿಯಲ್ಲ ಎಂದರು.

Tags

Related Articles

Leave a Reply

Your email address will not be published. Required fields are marked *

Language
Close