About Us Advertise with us Be a Reporter E-Paper

Breaking Newsರಾಜ್ಯ

ನಾಳೆಯಿಂದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ದೆಹಲಿಯತ್ತ ಬಿಎಸ್‍ವೈ

ಬೆಂಗಳೂರು: ನಾಳೆಯಿಂದ ಎರಡು ದಿನಗಳ ಕಾಲ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನವದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ.

ಸೆಪ್ಟೆಂಬರ್ 8 ಮತ್ತು 9 ರಂದು ಎರಡು ದಿನ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು ಎಲ್ಲಾ ರಾಜ್ಯಗಳ ಬಿಜೆಪಿ ಘಟಕದ ಅಧ್ಯಕ್ಷರು, ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅದರಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಜ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ, ಪಕ್ಷದ ಬಲ, ಸಂಘಟನೆ, ವರ್ಚಸ್ಸು, ರಾಜ್ಯ ಪ್ರವಾಸ ಹಾಗು ಪಕ್ಷದ ಚಟುವಟಿಕೆಯ ಸಮಗ್ರ ಮಾಹಿತಿಯ ವರದಿಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗೆ ನೀಡಲಿದ್ದಾರೆ. ಡಿಸೆಂಬರ್ ವೇಳೆಗೆ ರಾಜಸ್ಥಾನ, ತೆಲಂಗಾಣ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯಲಿದ್ದು, 2019ರ ಏಪ್ರಿಲ್, ಮೇ ತಿಂಗಳಿನಲ್ಲಿ ನಡೆಯುವ ಚುನಾವಣೆಗೂ ಮುನ್ನ ನಡೆಯುವ ಚುನಾವಣೆ ಇದಾಗಿದೆ.

ಈ ಚುನಾವಣಾ ಫಲಿತಾಂಶ ಲೋಕಸಭೆ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹಿನ್ನಲೆಯಲ್ಲಿ ಈ ಕಾರ್ಯಕಾರಿಣಿ ಸಭೆ ಮಹತ್ವ ಪಡೆದುಕೊಂಡಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನದಿಂದಾಗಿ ಆಗಸ್ಟ್ 18-19 ರಂದು ನಡೆಯಬೇಕಿದ್ದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಮುಂದೂಡಲಾಗಿತ್ತು. ಅದರಂತೆ ಸೆಪ್ಟೆಂಬರ್ 8, 9 ರಂದು ನಿಗದಿಪಡಿಸಲಾಗಿದೆ. ವರ್ಷದ ನಂತರ ನಡೆಯುತ್ತಿರುವ ಮೊದಲ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇದಾಗಿದೆ.

Tags

Related Articles

Leave a Reply

Your email address will not be published. Required fields are marked *

Language
Close