About Us Advertise with us Be a Reporter E-Paper

Breaking Newsದೇಶಪ್ರಚಲಿತ

ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಮೀಸಲಾತಿ ನೀಡಲು 4.5 ವರ್ಷ ಬೇಕಾಯಿತೇ…?: ಓಮರ್‌ ಅಬ್ದುಲ್ಲಾ

ದೆಹಲಿ: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.10 ರಷ್ಟು ಮೀಸಲಾತಿ ನೀಡಲು ಕೇಂದ್ರ ಸರಕಾರಕ್ಕೆ 4.5 ವರ್ಷ ಬೇಕಾಯಿತೇ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್‌ ಅಬ್ದುಲ್ಲಾ ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.  ಈ ನಿರ್ಣಯದಿಂದ ಮೋದಿ ಸರ್ಕಾರ ಮುಂದಿನ ದಿನಗಳಲ್ಲಿ ಮೇಲ್ವರ್ಗದ ಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.10 ರಷ್ಟು ಮೀಸಲಾತಿ ನೀಡವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಜ.7 ರಂದು ಒಪ್ಪಿಗೆ ನೀಡಿದ ಕುರಿತು ಪ್ರತಿಕ್ರಿಯೆ ನೀಡಿದರು.

ಬಿಜೆಪಿಗೆ ಲೋಕಸಭಾ ಚುನಾವಣೆ ಹತ್ತಿರ ಬಂದ ಬಳಿಕ ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗವರಿಗೆ ಮೀಸಲಾತಿ ನೀಡಲು ನೆನಪಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದು 4.5 ವರ್ಷ ಪೂರ್ಣಗೊಂಡಿದೆ. ಇಲ್ಲಿಯವರೆಗೆ ಇರದ ಕಾಳಜಿ ಈಗ ಬರಲು ಕಾರಣ ಚುನಾವಣೆಯೇ ಹೊರತು ಮತ್ತೆ ಬೇರೆ ಏನು ಇಲ್ಲ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಛತ್ತೀಸ್‌ಗಡ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋತಿರುವುದರಿಂದ ಪಕ್ಷದತ್ತ ಮತದಾರರನ್ನು ಓಲೈಸಿಕೊಳ್ಳಲು ಬಿಜೆಪಿ ಸರಕಾರ ಈ ಕ್ರಮ ಕೈಗೊಂಡಿದೆ ಎಂದು ಆರೋಪಿಸಿದರು.

ಒಂದು ವೇಳೆ ಸಂಸತ್‌ನಲ್ಲಿ ಈ ಮಸೂದೆ ಪಾಸಾಗದಿದ್ದರೆ ಬಿಜೆಪಿಯವರು ನಾವು ಸಾಕಷ್ಟು ಪ್ರಯತ್ನಪಟ್ಟೆವು. ಆದರೆ ಸಂಸತ್‌ನಲ್ಲಿ ಅನುಮೋದನೆ ಸಿಗಲಿಲ್ಲ ಎಂದು ಹೇಳುತ್ತಾರೆ ಎಂದು ನ್ಯಾಷನಲ್‌ ಕಾನ್ಫರೆನ್ಸ್‌ ಉಪಾಧ್ಯಕ್ಷ ಓಮರ್‌ ಅಬ್ದುಲ್ಲಾ ಹೇಳಿದರು.

Tags

Related Articles

Leave a Reply

Your email address will not be published. Required fields are marked *

Language
Close