About Us Advertise with us Be a Reporter E-Paper

Breaking Newsರಾಜ್ಯ

ಶಿವಮೊಗ್ಗದಲ್ಲಿ ಅರಳಿದ ‘ಕಮಲ’

ಶಿವಮೊಗ್ಗ: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರ ಪಡೆದಿದೆ.

ಶಿವಮೊಗ್ಗ ಪಾಲಿಕೆಯ 35 ವಾರ್ಡ್ ಗಳಲ್ಲಿ  ಬಿಜೆಪಿ 20, ಕಾಂಗ್ರೆಸ್ 7, ಜೆಡಿಎಸ್ 2, ಎಸ್ ಡಿಪಿಐ 1 ಹಾಗೂ ಪಕ್ಷೇತರರು 5 ಸ್ಥಾನಗಳನ್ನು ಗಳಿಸಿದ್ದಾರೆ.  ಕಳೆದ ಬಾರಿ 8 ಸ್ಥಾನ ಗಳಿಸಿದ್ದ ಬಿಜೆಪಿ ಈ ಬಾರಿ 20 ಸ್ಥಾನ ಗಳಿಸಿ ಜಯಭೇರಿ ಬಾರಿಸಿದೆ.

21 ಜಿಲ್ಲೆಗಳಲ್ಲಿ ಮತದಾನ ನಡೆದಿದ್ದು,  29 ನಗರ ಸಭೆಗಳು, 53 ಪುರಸಭೆಗಳು, 20 ಪಟ್ಟಣ ಪಂಚಾಯಿತಿಯಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 9121 ಅಭ್ಯರ್ಥಿಗಳು ಕಣದಲ್ಲಿದ್ದರು.

Tags

Related Articles

Leave a Reply

Your email address will not be published. Required fields are marked *

Language
Close