About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಸಿಎಂ ನಾಟಿ, ಬಿಎಸ್‌ವೈ ಚಾಟಿ

ಬಳ್ಳಾರಿ: ರಾಜ್ಯದಲ್ಲಿ ರೈತರು ಬೆಳೆ ನಷ್ಟ, ಸಾಲ ಬಾಧೆ ತಾಳದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆತ್ಮಹತ್ಯೆ ತಡೆಯಲು ಪ್ರಮುಖವಾಗಿ ರೈತರ ಮಾಡಬೇಕು. ಅದು ಬಿಟ್ಟು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಂಡ್ಯದಲ್ಲಿ ಭತ್ತ ನಾಟಿ ಮಾಡಲು ಹೋಗಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹರಿಹಾಯ್ದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶೋ ಮಾಡಲು ಕುಮಾರಸ್ವಾಮಿ ಭತ್ತ ನಾಟಿ ಮಾಡಲು ಹೋಗಿದ್ದಾರೆ. ಭತ್ತ ನಾಟಿಯ ಶೋ ಮಾಡಿದರೆ ರೈತರಿಗೇನು ಪ್ರಯೋಜನವೆಂದು ಖಾರವಾಗಿ ಪ್ರಶ್ನಿಸಿದರು. ರೈತರ ಸಾಲ ಮನ್ನಾ ಮಾಡುವ ವಿಚಾರದಲ್ಲಿ ಕುಮಾರಸ್ವಾಮಿ ಗೊಂದಲದಲ್ಲಿ ಮುಳುಗಿದ್ದಾರೆ. ಆದರೆ ವರ್ಗಾವಣೆ ದಂಧೆ ಮಾತ್ರ ಸುಸೂತ್ರವಾಗಿ ನಡೆಯುತ್ತಿದೆ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ರೈತರು ಸಾಲ ಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿಯೇ ಆರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಅವರ ಕುಟುಂಬಕ್ಕೆ ಯಾವುದೇ ಪರಿಹಾರ ನೀಡಿಲ್ಲ. ಇಂಥ ಸಂದರ್ಭದಲ್ಲಿ ರೈತರಿಗೆ ಅಭಯ ನೀಡುವ ಕೆಲಸವಾಗಬೇಕು. ಅದನ್ನು ಬಿಟ್ಟು ಮುಖ್ಯಮಂತ್ರಿಗಳು ನಾಟಿ ಮಾಡಿದರೇನು ಬಂತು? ಎಂದು ಬಿಎಸ್‌ವೈ ಆಕ್ರೋಶ ವ್ಯಕ್ತಪಡಿಸಿದರು.

ರೈತರ ಸಾಲಮನ್ನಾ ವಿಚಾರ ಮತ್ತು ರಾಜ್ಯದಲ್ಲಿ ಅಭಿವೃದ್ಧಿ ವಿಚಾರ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ನಾವೇನು ಗಿಡ ನೆಟ್ಟಿಲ್ಲ ಎಂದು ಹಗುರವಾಗಿ ಮಾತನಾಡುತ್ತಿರುವುದು ಶೋಭೆಯಲ್ಲ. ರಾಜ್ಯದ ಮುಖ್ಯಮಂತ್ರಿ ಆದ ನಂತರ ರೈತರ ಸಾಲ ಮನ್ನಾ ಮಾಡುತ್ತೇನೆ ಎಂದು ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದರು. ಮುಖ್ಯಮಂತ್ರಿ ಆದ ಮೇಲೆ ಆ ಪ್ರಣಾಳಿಕೆ ಎಲ್ಲಿ ಹೋಯ್ತು ಎಂದು ಬಿಎಸ್‌ವೈ ಪ್ರಶ್ನಿಸಿದರು.

ರಾಜ್ಯದಲ್ಲಿ ಅಭಿವೃದ್ಧಿ ನಿಂತನೀರಾಗಿದೆ. ಸಮ್ಮಿಶ್ರ ಸರಕಾರ ಸಂಪೂರ್ಣ ವಿಫಲವಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಹಾವೇರಿ ಮತ್ತು ಮಾಲೂರಿನಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದಿರುವ ಅತ್ಯಾಚಾರ, ಪ್ರಕರಣಗಳೇ ಇದಕ್ಕೆ ಸಾಕ್ಷಿ. ಕುಡಿಯುವ ನೀರಿನ ಸಮಸ್ಯೆಯಿಂದ ಜನ, ಜಾನುವಾರು ಪರಿತಪಿಸುವಂತಾಗಿದೆ. ಈ ಬಗ್ಗೆ ಸರಕಾರ ಕಿವಿಗೊಡುತ್ತಿಲ್ಲ ಎಂದರು.

ರಾಜ್ಯ ಸರಕಾರ ರೈತರ ಆತ್ಮಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಸಾಲ ಮನ್ನಾ ವಿಚಾರದಲ್ಲಿ ಸರಕಾರ ಇನ್ನೂ ಗೊಂದಲದಲ್ಲಿದೆ. ಆದರೆ ವರ್ಗಾವಣೆ ದಂಧೆಯನ್ನು ಮಾತ್ರ ಸುಸೂತ್ರವಾಗಿ ನಡೆಸುತ್ತಿದೆ.
ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ

Tags

Related Articles

One Comment

  1. ನರಿ ಬುದ್ಧಿ ದೊಡ್ಡ ಗೌಡ ಮತ್ತು ಅವನ ಮಕ್ಕಳು ಮತ್ತು ಕುರಿ ಬುದ್ಧಿ ದಡ್ಡ ಗೌಡರು ಇರುವವರೆಗೆ ನಮ್ಮ ನಾಡು ಉದ್ಧಾರವಾಗಲ್ಲ, ಒಳ್ಳೆಯ ದಿನಗಳೂ ಬರುವುದಿಲ್ಲ.

Leave a Reply

Your email address will not be published. Required fields are marked *

Language
Close