ಜಯನಗರದಲ್ಲಿ ಹೊಂದಾಣಿಕೆಯಿಂದ ಕಾಂಗ್ರೆಸ್‌ಗೆ ಜಯ: ಬಿಎಸ್‌ವೈ

Posted In : ಬೆಂಗಳೂರು, ರಾಜ್ಯ

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡ ಕಾರಣ ನಮ್ಮ ಅಭ್ಯರ್ಥಿ ಅಲ್ಪ ಮತಗಳಿಂದ ಪರಾಭವಗೊಳ್ಳುವಂತಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಬಾಬು ಕಡಿಮೆ ಅಂತರದಲ್ಲಿ ಸೋತಿದ್ದಾರೆ. ನಮ್ಮ ಕಾರ್ಯಕರ್ತರು ಶ್ರಮಿಸಿದ್ದರು. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಮ್ಮ ಮೇಲೆ ಜಯನಗರ ಮತದಾರರು ವಿಶ್ವಾಸ ಇಟ್ಟು ಹೆಚ್ಚು ಮತ ಕೊಟ್ಟಿದ್ದಾರೆ ಎಂದರು.

ಜೆಡಿಎಸ್ ಅಭ್ಯರ್ಥಿ ಕಡೆ ಗಳಿಗೆಯಲ್ಲಿ ಹೊಂದಾಣಿಕೆ ಮಾಡಿಕೊಂಡರು. ಇದು ನಮಗೆ ಸ್ವಲ್ಪ ಮಟ್ಟಿನ ಹಿನ್ನಡೆ ಆಗಿದೆ. ಪ್ರಹ್ಲಾದ್ ಬಾಬು ಹೊಸ ಮುಖ, ಜನರಿಗೆ ಪರಿಚಯ ಇರಲಿಲ್ಲ. ಆದರೂ ಹೆಚ್ಚು ಮತ ಕೊಟ್ಟಿದ್ದಾರೆ. ಎಲ್ಲರ ಶ್ರಮದಿಂದ ಹೆಚ್ಚು ಮತ ಸಿಕ್ಕಿದೆ ಎಂದರು.

Leave a Reply

Your email address will not be published. Required fields are marked *

five × 2 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top