About Us Advertise with us Be a Reporter E-Paper

Breaking NewsUncategorizedರಾಜ್ಯ

ಬಿಎಸ್‌ವೈ ಸಿಎಂ ಆಗಲು ಸಾಧ್ಯವೇ ಇಲ್ಲ: ಜಮೀರ್ ಅಹ್ಮದ್

ಹಾವೇರಿ: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ಸಾಧ್ಯವೇ ಇಲ್ಲ. ಅವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ವ್ಯಂಗ್ಯವಾಡಿದರು.
ಬಿಜೆಪಿ ಜತೆ ಐದು ಶಾಸಕರು ಇಲ್ಲ. ಕಾಂಗ್ರೆಸ್-ಜೆಡಿಎಸ್ ಶಾಸಕರು ಒಗ್ಗಾಟ್ಟಾಗಿದ್ದೇವೆ. ಸಮ್ಮಿಶ್ರ ಸರಕಾರ ಐದು ವರ್ಷ ಸುಭದ್ರವಾಗಿರುತ್ತೆ ಎಂದು ಜಮೀರ್ ಹೇಳಿದರು. ಇನ್ನು ಸಚಿವ ಡಿ.ಕೆ.ಶಿವಕುಮಾರ್ ಅವರ ಮೇಲೆ ಇಡಿ ಕೇಸ್ ಹಿನ್ನೆಲೆ, ಅವರಿಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಜಮೀರ್ ಸ್ಪಷ್ಟಪಡಿಸಿದರು. ಡಿಕೆಶಿ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಹಣ ವರ್ಗಾವಣೆ ಮಾಡಿರುವ ವಿಚಾರದ ಕುರಿತು ಯಾವುದೇ ದಾಖಲೆಗಳು ಇಲ್ಲ. ಹೀಗಿರುವಾಗ ಕಾಂಗ್ರೆಸ್ ಅವರಿಗೆ ಸಪೋರ್ಟ್ ಮಾಡುತ್ತೆ ಎಂದು ಹೇಳಿದರು.
Tags

Related Articles

Leave a Reply

Your email address will not be published. Required fields are marked *

Language
Close