About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಬಜೆಟ್‌ನಲ್ಲಿ ವಕೀಲರ ಕಡಗಣನೆ: ಕಲಾಪ ಬಹಿಷ್ಕರಿಸಿ ಪ್ರತಿಭಟನೆ

ತುಮಕೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಜೆಟ್‌ನಲ್ಲಿ ವಕೀಲ ಸಮುದಾಯವನ್ನು ಕಡೆಗಣಿಸಿವೆ ಎಂದು ಆರೋಪಿಸಿ ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರದ ನ್ಯಾಯಾಲಯದ ಆವರಣದಿಂದ ವಕೀಲರು ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೆರಳಿ ಪ್ರತಿಭಟನೆ ನಡೆಸಿದರು. ನಿನ್ನೆ ನಡೆದ ವಿಶೇಷ ಸರ್ವಸದಸ್ಯರ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಂಡಿದ್ದು, ಭಾರತೀಯ ವಕೀಲರ ಪರಿಷತ್ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲಾ ವಕೀಲರ ಸಂಘವು ಇದಕ್ಕೆ ಬೆಂಬಲ ವ್ಯಕ್ತಪಡಿಸಿದೆ.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜೆ.ಕೆ.ಅನಿಲ್ ನೇತೃತ್ವದಲ್ಲಿ ಇತರೆ ಪದಾಧಿಕಾರಿಗಳು ಹಾಗೂ ಸದಸ್ಯರು ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿ ಡಾ. ಕೆ.ರಾಕೇಶ್‌ಕುಮಾರ್ ಅವರಿಗೆ ಮನವಿಯನ್ನು ಸಲ್ಲಿಸಿ, ಜನವರಿ 2 ರಂದು ಭಾರತೀಯ ವಕೀಲರ ಪರಿಷತ್ ತೆಗೆದುಕೊಂಡ ನಿರ್ಣಯಗಳ ಪ್ರತಿಯನ್ನು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಹಾಗೂ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಅವರಿಗೆ ರವಾನಿಸುವಂತೆ ಮನವಿ ಮಾಡಿಕೊಳ್ಳಲಾಯಿತು.

ವಕೀಲರ ರಕ್ಷಣೆ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಲು ಕೇಂದ್ರ ಸರ್ಕಾರವನ್ನು ಒತ್ತಾಯಿಸುವಂತೆ ನಿರ್ಣಯವನ್ನು ನಿನ್ನೆ ನಡೆದ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಪ್ರತಿಭಟನೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಜೆ.ಕೆ.ಅನಿಲ್, ಉಪಾಧ್ಯಕ್ಷ ಹರೀಶ್‌ಬಾಬು, ಪ್ರಧಾನ ಕಾರ್ಯದರ್ಶಿ ಬಿ.ಆರ್.ದೇವರಾಜು, ಜಂಟಿ ಕಾರ್ಯದರ್ಶಿ ಎನ್.ಆರ್.ಲೋಕೇಶ್, ಕೋಶಾಧ್ಯಕ್ಷ ಆರ್.ಪಾತಣ್ಣ ಸೇರಿದಂತೆ ಕಾರ್ಯಕಾರಿ ಸಮಿತಿ ಸದಸ್ಯರುಗಳು, ವಕೀಲರು ಭಾಗವಹಿಸಿದ್ದರು.

Tags

Related Articles

Leave a Reply

Your email address will not be published. Required fields are marked *

Language
Close