About Us Advertise with us Be a Reporter E-Paper

ರಾಜ್ಯ

ಬಸ್ ಪಲ್ಟಿ, ಇಬ್ಬರಿಗೆ ಗಾಯ

ಬಾಗಲಕೋಟೆ : ಚಾಲಕನ ನಿಯಂತ್ರಣ ತಪ್ಪಿ ಕೆಎಸ್‍ಆರ್ಟಿಸಿ ಬಸ್ ಪಲ್ಟಿ ಆದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಕಟನಕೇರಿ ಕ್ರಾಸ್‍ನಲ್ಲಿ ನಡೆದಿದೆ.

ಚಾಲಕ ಬಸ್ ಚಾಲನೆ ಮಾಡುತ್ತಿರಬೇಕಾದರೆ ತಲೆಸುತ್ತು ಬಂದ ಪರಿಣಾಮ, ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದ್ದು, ಇಬ್ಬರು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಬಸ್ ಗೋವಾದ ವಾಸ್ಕೋದಿಂದ ಬಾದಾಮಿ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ದುರ್ಘಟನೆ ನಡೆದಿದೆ.

ಇನ್ನು ಗಾಯಾಳುಗಳನ್ನು ಬಾದಾಮಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಸಂಬಂಧ ಬಾದಾಮಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close