lakshmi-electricals

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು

Posted In : ರಾಜ್ಯ, ಶಿವಮೊಗ್ಗ

ಶಿವಮೊಗ್ಗ:ನಗರದ ಹೊರವಲಯದ ಪುರಲೆ ಕೆರೆಗೆ ತವೇರಾ ಕಾರು ಬಿದ್ದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚನ್ನಗಿರಿಯ ರಾಘವೇಂದ್ರ ಎಂಬುವರು ಕುಟುಂಬ ಸಮೇತ ತವೇರಾ ಕಾರಿನಲ್ಲಿ ಶಿವಮೊಗ್ಗ ಬರುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಬೈಕನ್ನು ತಪ್ಪಿಸಲು ಹೋದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆ. ಕೂಡಲೇ ಸ್ಥಳದಲ್ಲಿದ್ದವರು ಕಾರಿನಲ್ಲಿದ್ದವರನ್ನು ಹೊರಗೆಳೆದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಲ್ಲದಿದ್ದಲ್ಲಿ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆಯಿತ್ತು. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

four + one =

 
Back To Top