About Us Advertise with us Be a Reporter E-Paper

Breaking Newsರಾಜ್ಯ

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಒಬ್ಬ ಸಾವು

ಹಾಸನ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಮಂಜುನಾಥಯ್ಯ(75) ಮೃತ ದುರ್ದೈವಿ. ಘಟನೆಯಲ್ಲಿ ಮತ್ತೊಂದು ಕಾರ್​ನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಶಿವಮೊಗ್ಗದಿಂದ ಚನ್ನರಾಯಪಟ್ಟಣಕ್ಕೆ ಫೋರ್ಡ್ ಕಾರು ಹೋಗುತ್ತಿತ್ತು. ಇತ್ತ ವ್ಯಾಗನಾರ್ ಕಾರ್​ ಗುಬ್ಬಿಯಿಂದ ಚಿಕ್ಕಮಗಳೂರು ಕಡೆಗೆ ಹೊರಟಿತ್ತು. ಈ ವೇಳೆ  ಹೊಸ ಕಲ್ಲನಾಯಕನಹಳ್ಳ ಗೇಟ್ ಬಳಿ ಎರಡು ಕಾರ್​ಗಳ ನಡುವೆ ಅಪಘಾತವಾಗಿದೆ ಎನ್ನಲಾಗಿದೆ.

ಸ್ಥಳಕ್ಕೆ ಅರಸಿಕೆರೆ ಗ್ರಾಮಾಂತರ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close