About Us Advertise with us Be a Reporter E-Paper

Breaking Newsಕ್ರೀಡೆಪ್ರಚಲಿತ
Trending

ಶತಕ ಸಿಡಿಸಿ ಟೀಂ ಇಂಡಿಯಾಗೆ ಆಸರೆಯಾದ ಚೇತೇಶ್ವರ ಪೂಜಾರ

ಅಡಿಲೇಡ್(ಆಸ್ಟ್ರೇಲಿಯಾ): ಆಸೀಸ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೊದಲ ದಿನದಾಟದಲ್ಲಿ ಟೀಂ ಇಂಡಿಯಾದ ಚೇತೇಶ್ವರ ಪೂಜಾರ ಶತಕ ಸಿಡಿಸುವ ಮೂಲಕ ಮುಳುಗುತ್ತಿದ್ದ ತಂಡಕ್ಕೆ ಆಸರೆಯಾಗಿದ್ದಾರೆ.

ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ಕೆಎಲ್ ರಾಹುಲ್ 2 ರನ್ ಗಳಿಸಿ ಔಟಾದರೆ, ಮುರಳಿ ವಿಜಯ್ 11 ರನ್ ಗಳಿಸಿ ಪೆವಿಲಿಯನ್ ಸೇರಿದರು. ಇನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬಂದಷ್ಟೇ ವೇಗವಾಗಿ ಕ್ವಾವಜಾಗೆ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದರು. ನಂತರ ತಾಳ್ಮೆಯ ಆಟವಾಡುತ್ತಿದ್ದ ಅಜಿಂಕ್ಯ ರಹಾನೆ ಸಹ 13 ರನ್ ಗಳಿಸಿ ಹಜಲ್ ವುಡ್ ಎಸೆತದಲ್ಲಿ ಹ್ಯಾಂಡ್ಸ್ ಕ್ಯೂಬ್ ಗೆ ಕ್ಯಾಚ್ ನೀಡಿ ಔಟಾದರು.

ಈ ವೇಳೆ ತಾಳ್ಮೆಯ ಆಟವಾಡಿದ ಚೇತೇಶ್ವರ ಪೂಜಾರ 123 ಗಳಿಸಿ ಔಟಾದರು. ಪೂಜಾರ ಶತಕದ ನೆರವಿನಿಂದ ತಂಡ ಅಲ್ಪಮೊತ್ತಕ್ಕೆ ಆಲೌಟ್ ಆಗುವುದರಿಂದ ತಪ್ಪಿಸಿದರು. ರೋಹಿತ್ ಶರ್ಮಾ 37, ರಿಷಬ್ ಪಂತ್ 25, ಆರ್ ಅಶ್ವಿನ್ 25 ರನ್ ಪೇರಿಸಿ ಔಟಾದರು. ದಿನದ ಅಂತ್ಯಕ್ಕೆ 9 ವಿಕೆಟ್ ಗಳನ್ನು ಕಳೆದುಕೊಂಡು 250 ರನ್ ಗಳಿಸಿದೆ. ಬೂಮ್ರಾ ಮತ್ತು ಮಹಮ್ಮದ್ ಶಮೀರ್ ನಾಳೆಗೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close