About Us Advertise with us Be a Reporter E-Paper

Breaking Newsಪ್ರಚಲಿತಸಿನಿಮಾಸ್
Trending

ಚಾಲೆಂಜಿಂಗ್ ಸ್ಟಾರ್ ದರ್ಶನ್‍ಗೆ ಮುಂದುವರಿದ ಚಿಕಿತ್ಸೆ

ಮೈಸೂರು: ಕಾರ್ ಅಪಘಾತದಲ್ಲಿ ಗಾಯಗೊಂಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ದರ್ಶನ್ ಜೊತೆಗೆ ನಟ ದೇವರಾಜ್, ಪ್ರಜ್ವಲ್ ಹಾಗೂ ಅಂತೋನಿ ಅವರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ನಾಲ್ವರಿಗೂ ಸ್ಪೆಷಲ್ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದರ್ಶನ್, ದೇವರಾಜ್, ಅಂತೋನಿಯವರಿಗೆ ಸೋಮವಾರ ಶಸ್ತ್ರಚಿಕಿತ್ಸೆ ನಡೆದಿದೆ. ಮಂಗಳವಾರ ಸಂಜೆಯೊಳಗೆ ನಟ ದೇವರಾಜ್, ಪುತ್ರ ಪ್ರಜ್ವಲ್ ದೇವರಾಜ್ ಡಿಸ್ಚಾರ್ಜ್ ಆಗಲಿದ್ದಾರೆ. ಆದ್ರೆ ದರ್ಶನ್ ಅವರು ಇನ್ನೂ ಒಂದು ದಿನ ಆಸ್ಪತ್ರೆಯಲ್ಲೇ ಉಳಿಯಲಿದ್ದಾರೆ ಎಂಬುದಾಗಿ ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ.

ಇನ್ನು ಸುದ್ದಿ ತಿಳಿದ ಅಭಿಮಾನಿಗಳು ಆಸ್ಪತ್ರೆಯತ್ತ ಬರುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಆವರಣದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಮುಂದುವರಿದಿದೆ. ಸಿ.ಆರ್.ಪಿ.ಎಫ್ ತುಕಡಿ ಪೊಲೀಸ್ ಸಿಬ್ಬಂದಿಯನ್ನು ಕೂಡ ನಿಯೋಜಿಸಲಾಗಿದೆ.

Tags

Related Articles

Leave a Reply

Your email address will not be published. Required fields are marked *

Language
Close