ಪ್ರೀತಿ ಹೆಸರಿನಲ್ಲಿ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕೆಲ ದಿನಗಳಿಂದ ಯುವಕನೊಬ್ಬ ಪ್ರೀತಿಸುವಂತೆ ಯುವತಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಹೀಗಾಗಿ ಯುವಕನ ಕಾಟಕ್ಕೆ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಸಂಬಂಧ ಯಳಂದೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.