About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಿಂಟಿಂಗ್‌ ಮಿಷನ್‌‌ ಇಟ್ಟಿದ್ದಾರೆಯೇ: ಎಚ್.ಡಿ.ರೇವಣ್ಣ

ಮಂಡ್ಯ: ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಬೆಂಬಲ ಬೆಲೆ ನೀಡುವಂತೆ ನಡೆಸುತ್ತಿರುವ ಹೋರಾಟಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಿಂಟ್ ಮಾಡುವ ಮಿಷನ್ ಇಟ್ಟಿದ್ದಾರೆಯೇ ಎಂದು ಉಡಾಫೆ ಉತ್ತರ ನೀಡಿದ್ದಾರೆ.

ಮಂಡ್ಯ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆೆಗೆ ಪ್ರತಿಕ್ರಿಯಿಸಿದ್ದಾರೆ. ಎಲ್ಲದಕ್ಕೂ ಕುಮಾರಸ್ವಾಮಿಯನ್ನು ಹಿಡಿದುಕೊಂಡರೆ, ಅವರೇನು ಪ್ರಿಂಟ್ ಮಾಡುವ ಮಿಷನ್ ಇಟ್ಟಿದ್ದಾರಾ. ಕಬ್ಬು ಬೆಳೆಗಾರರಿಗೆ ಸಮಸ್ಯೆ ಇರುವುದು ಇಡೀ ರಾಷ್ಟ್ರಕ್ಕೆೆ ಗೊತ್ತಿದೆ. ಪ್ರತಿಭಟನಾಕಾರರು ಟ್ರ್ಯಾಕ್ಟರ್ ಸುಡುವುದು, ಕಾರ್ಖಾನೆಗೆ ರೈತರು ತೆಗೆದುಕೊಂಡು ಹೋಗುವ ಕಬ್ಬನ್ನು ತಡೆಯುವುದು ಸರಿಯಲ್ಲ. ಕೇಂದ್ರ ಸರ್ಕಾರ ಮಧ್ಯೆ ಪ್ರವೇಶ ಮಾಡಿ ಕಬ್ಬು ಬೆಳೆಗಾರರಿಗೆ ಬೆಂಬಲ ನೀಡಬೇಕು ಎಂದರು.

ಪ್ರತಿಭಟನೆ ಹಿಂದೆ ಯಾರು ಇದ್ದಾರೆ ಎನ್ನುವುದು ನಮಗ ಗೊತ್ತಿದೆ. ಎಲ್ಲದಕ್ಕೂ ರಾಜ್ಯ ಸರ್ಕಾರವನ್ನು ಹಿಡಿದುಕೊಂಡರೆ ಹೇಗೆ? ರಾಜ್ಯ ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಮಿಷನ್ ಇದ್ಯಾ? ಎಂದು ಕಿಡಿಕಾರಿದರು.

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿ ಆಗಬೇಕು ಎನ್ನುವ ಕೂಗು ಕೇಳಿ ಬಂದ ವಿಚಾರಕ್ಕೆ ಉತ್ತರಿಸಿದ ಅವರು, ಯಾರು ಮುಖ್ಯಮಂತ್ರಿ ಆಗಬೇಕು ಎನ್ನುವ ವಿಚಾರ ನನಗೆ ಸಂಬಂಧವಿಲ್ಲ. ಅದು ಏನಿದ್ದರೂ ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ. ಇದು ದೇವೇಗೌಡರಿಗೆ ಬಿಟ್ಟ ವಿಚಾರ ಎಂದರು.

ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾವು ಏನಾದರೂ ವಿಸ್ತರಣೆ ಮಾಡುವುದು ಬೇಡ ಅಂತ ಹಿಡಿದುಕೊಂಡಿದ್ದೀವಾ?. ನಾನು ಒಪ್ಪಿಗೆ ಕೊಡಲು ನಾನೇನು ರಾಷ್ಟ್ರೀಯ ಅಧ್ಯಕ್ಷನಲ್ಲ ಎಂದು ಹೇಳಿದರು.

Tags

Related Articles

Leave a Reply

Your email address will not be published. Required fields are marked *

Language
Close