About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಮುಖ್ಯಮಂತ್ರಿಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಲಿ: ಶಾಸಕ ಜ್ಯೋತಿಗಣೇಶ್

ತುಮಕೂರು: ರೈತ ಮಹಿಳೆ ಬಗ್ಗೆ ಕೀಳುಮಟ್ಟದಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಗೆ ನೈತಿಕತೆ ಇದ್ದರೆ ರಾಜಿನಾಮೆ ನೀಡಲಿ ಎಂದು ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಒತ್ತಾಯಿಸಿದರು.

ನಗರದ ಟೌನ್‌ಹಾಲ್ ವೃತ್ತದಲ್ಲಿ ಬುಧವಾರ ಜಿಲ್ಲಾ ಬಿಜೆಪಿವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು. ಕಬ್ಬು ಬೆಳೆಗಾರರ ಹಣವನ್ನು ಕೊಡಿಸುವಂತೆ ಒತ್ತಾಯಿಸಿ ಬೆಳಗಾವಿಯ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಿದ ರೈತ ಮಹಿಳೆಯ ಮೇಲೆ ತಮ್ಮ ಪೌರುಷದ ಮಾತನಾಡಿರುವುದು ಖಂಡನೀಯ ಇದನ್ನು ಭಾರತೀಯ ಜನತಾ ಪಾರ್ಟಿ ಖಂಡಿಸುತ್ತದೆ ಎಂದು ಕಿಡಿಕಾರಿದರು.

ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಮಾತನಾಡಿ, ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರೈತರ ಸಾಲ ಮನ್ನಾ ಮಾಡುತ್ತೇನೆ ಎಂದು ಸುಳ್ಳು ಭರವಸೆ ನೀಡುವ ಡೋಂಗಿ ಮುಖ್ಯ ಮಂತ್ರಿ ಕುಮಾರಸ್ವಾಮಿಯವರು ರೈತರನ್ನು ಗುಂಡಾಗಳು ಎಂದು ಕರೆದಿರುವುದು ರಾಜ್ಯದ ರೈತ ಸಮೂಹಕ್ಕೆ ಮಾಡಿದ ಅವಮಾನ ಎಂದು ತಿಳಿಸಿದರು.

ಮಾಜಿ ವಿಧಾನ ಪರಿಷತ್ ಸದಸ್ಯರಾದ ಡಾ: ಹುಲಿನಾಯ್ಕರ್ ಮಾತನಾಡಿ, ಉತ್ತರ ಕರ್ನಾಟಕದ ರೈತರ ಬವಣೆ ಮುಖ್ಯ ಮಂತ್ರಿ ಕುಮಾರಸ್ವಾಮಿಯವರಿಗೆ ಹೇಗೆ ತಿಳಿಯುತ್ತದೆ. ಕೇವಲ 3 ಜಿಲ್ಲೆಗಳಿಗೆ ಸೀಮಿತವಾದ ಮುಖ್ಯ ರಾಜೀನಾಮೆ ನೀಡಬೇಕೆಂದರು.

ಈ ಪ್ರತಿಭಟನೆಯಲ್ಲಿ ಮುಖಂಡ ಬ್ಯಾಟರಂಗೇಗೌಡ, ಹೆಚ್.ಎಂ. ರವೀಶ್, ಸಾಗರನಹಳ್ಳಿ ವಿಜಯಕುಮಾರ್, ಟಿ.ಆರ್. ಸದಾಶಿವಯ್ಯ, ಸ್ನೇಕ್ ನಂದೀಶ್, ಸದಣ್ಣ, ಗುರು ಸಿದ್ದೇಗೌಡ, ಕೊಪ್ಪಳ ನಾಗರಾಜ್, ಇಂದ್ರಕುಮಾರ್, ಶಬ್ಬೀರ್ ಅಹಮದ್, ಶಂಭುಲಿಂಗಸ್ವಾಮಿ ಇದ್ದರು.

Tags

Related Articles

Leave a Reply

Your email address will not be published. Required fields are marked *

Language
Close