ಮರು ಮತ ಎಣಿಕೆಯಲ್ಲಿ ಕೈ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಗೆಲುವು
Chikkamagaluru MLC Election Recount: 2021ರ ಡಿಸೆಂಬರ್‌ನಲ್ಲಿ ನಡೆದಿದ್ದ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಎಂ.ಕೆ. ಪ್ರಾಣೇಶ್ ಅವರು 6 ಮತಗಳಿಂದ ಗೆದ್ದಿದ್ದರು. ಆದರೆ, ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸಿರುವುದನ್ನು ಆಕ್ಷೇಪಿಸಿ ಗಾಯತ್ರಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಮರು ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಗೆಲುವು ಪಡೆದಿದ್ದಾರೆ.