About Us Advertise with us Be a Reporter E-Paper

Breaking Newsರಾಜ್ಯ
Trending

ಬೆಂಗಳೂರಿನಲ್ಲಿ ಮಕ್ಕಳೇ ಕಳ್ಳರಾಗಿದ್ದಾರೆ ಹುಷಾರ್..!

ಬೆಂಗಳೂರು: ಚಿಕ್ಕ ಮಕ್ಕಳನ್ನು ಕಳುಹಿಸಿ ಕಳ್ಳತನ ಮಾಡಿಸುತ್ತಿರುವ ಘಟನೆ ನೆಲಮಂಗಲ ಸಮೀಪದ ಅಡಕಿಮಾರನಹಳ್ಳಿಯಲ್ಲಿ ನಡೆದಿದೆ.

ಇಬ್ಬರು ಚಿಕ್ಕ ಮಕ್ಕಳು ಮೊಬೈಲ್ ಅಂಗಡಿಗೆ ಬಂದು, ಕ್ಯಾಶ್ ಕೌಂಟರ್ ನಲ್ಲಿ ಇದ್ದ ವಸ್ತು ಹಾಗೂ ಹಣವನ್ನು ತೆಗೆದುಕೊಂಡು ಹೋಗಿದ್ದರು. ಬಳಿಕ ಕಳ್ಳತನವಾಗಿದೆ ಎಂದು ಅರಿತ ಅಂಗಡಿಯ ಮಾಲೀಕ ಮಂಜುನಾಥ್ ಸಿಸಿಟಿವಿ ಕ್ಯಾಮರಾ ದೃಶ್ಯಗಳನ್ನು ನೋಡಿದಾಗ ಮಕ್ಕಳ ಕೈ ಚಳಕ ಬಯಲಾಗಿದೆ.

ಇನ್ನು ಮಕ್ಕಳು ಸ್ಥಳೀಯ ನಿವಾಸಿಗಳು ಎಂದು ಅರಿತ ಅಂಗಡಿ ಮಾಲೀಕ ಮಂಜುನಾಥ್ ಅವರ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ. ಸ್ಥಳೀಯ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರನ್ನು ವಿಚಾರಿಸಿದ್ದಾರೆ. ಇದನ್ನು ಆಧಾರಿಸಿ ಮಂಜನಾಥ್ ಕಳ್ಳತನ ಮಾಡಿದ ಮಕ್ಕಳ ಮನೆಗೆ ಹೋದಾಗ ಒಬ್ಬ ಬಾಲಕ ಮಾತ್ರ ಸಿಕ್ಕಿಬಿದ್ದಿದ್ದಾನೆ. ವಿಚಾರಣೆಗೆ ಒಳಪಡಿಸಿದಾಗ ಕಳ್ಳತನ ಮಾಡಿದ್ದ 18 ಸಾವಿರ ರೂ. ತಂದುಕೊಟ್ಟಿದ್ದಾನೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Tags

Related Articles

Leave a Reply

Your email address will not be published. Required fields are marked *

Language
Close