ಚಿತ್ರದುರ್ಗದಲ್ಲಿ ಭೀಕರ ಅಪಘಾತ; ಲಾರಿಗೆ ಕಾರು ಡಿಕ್ಕಿಯಾಗಿ ಮೂವರ ಸಾವು!
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್. ಹಳ್ಳಿ ಗೇಟ್ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಕೆ.ಆರ್. ಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಸರಕು ಸಾಗಣೆ ಲಾರಿಯ ಟೈರ್ ದಿಢೀರನೆ ಸಿಡಿದಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಗೆ ಹಿಂಬದಿ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.