ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Suthradaari Trailer: 'ಸೂತ್ರಧಾರಿ' ಚಿತ್ರದ ಟ್ರೈಲರ್ ರಿಲೀಸ್ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

Suthradaari Trailer: ಮೇ 9 ಕ್ಕೆ ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ಸೂತ್ರಧಾರಿ ಚಿತ್ರದ ಟ್ರೇಲರ್ ಅನ್ನು ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಅನಾವರಣ ಮಾಡಿದ್ದಾರೆ. ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ನವರಸನ್‌ ನಿರ್ಮಾಣ‌ ಮಾಡಿರುವ,‌ ಕಿರಣ್ ಕುಮಾರ್ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ಚಿತ್ರ ಇದಾಗಿದೆ.

'ಸೂತ್ರಧಾರಿ' ಟ್ರೈಲರ್ ರಿಲೀಸ್ ಮಾಡಿದ ನಟ ಧ್ರುವ ಸರ್ಜಾ

Profile Prabhakara R Apr 27, 2025 5:25 PM

ಬೆಂಗಳೂರು: ಮೇ 9ಕ್ಕೆ ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ಸೂತ್ರಧಾರಿ ಚಿತ್ರದ ಟ್ರೈಲರ್‌ ಅನ್ನು ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಅನಾವರಣ ಮಾಡಿದ್ದಾರೆ. ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ನವರಸನ್‌ ನಿರ್ಮಾಣ‌ ಮಾಡಿರುವ,‌ ಕಿರಣ್ ಕುಮಾರ್ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ʼಸೂತ್ರಧಾರಿʼ (Suthradaari Trailer) ಚಿತ್ರದ ಟ್ರೈಲರ್ ಅನ್ನು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಶನಿವಾರ ಬಿಡುಗಡೆ ಮಾಡಿದರು. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೈಲರ್ ಕುತೂಹಲ ಮೂಡಿಸಿದೆ‌. ಬಹು ನಿರೀಕ್ಷಿತ ಈ ಚಿತ್ರ ಮೇ 9 ರಂದು ಬಿಡುಗಡೆಯಾಗಲಿದೆ.

ಟ್ರೈಲರ್ ಬಿಡುಗಡೆ ನಂತರ ಮುಖ್ಯ ಆತಿಥಿಗಳಾಗಿ ಆಗಮಿಸಿದ್ದ ಧ್ರುವ ಸರ್ಜಾ ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.



ನಟ ಧ್ರುವ ಸರ್ಜಾ ಮಾತನಾಡಿ, ಟ್ರೈಲರ್ ಚೆನ್ನಾಗಿದೆ. ತಂತ್ರಜ್ಞರ ಕೆಲಸ ಹಾಗೂ ಕಲಾವಿದರ ಅಭಿನಯ ಸೊಗಸಾಗಿದೆ. ನಾನು ಇಲ್ಲಿಗೆ ಬರಲು ಎರಡು ಕಾರಣ. ಒಂದು ನಮ್ಮ ʼಪೊಗರುʼ ಚಿತ್ರದ ಇವೆಂಟ್ ಆಯೋಜನೆ ಮಾಡಿದ್ದು ನವರಸನ್ ಅವರು. ಮತ್ತೊಂದು ನನ್ನ ಬಾಲ್ಯದ ಗೆಳೆಯ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಮೊದಲ ಚಿತ್ರವಿದು ಎಂದು ತಿಳಿಸಿ ಚಿತ್ರಕ್ಕೆ ಶುಭ ಹಾರೈಸಿದರು. ಅಲ್ಲದೇ ಮೇ 9 ರಂದು ಕುಟುಂಬ ಸಮೇತ ಚಿತ್ರ ನೋಡುವುದಾಗಿ ಹೇಳಿದರು.

Chandan Shetty

ನಿರ್ಮಾಪಕ ನವರಸನ್ ಮಾತನಾಡಿ, ಟ್ರೈಲರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ಧನ್ಯವಾದ. ನಾವು ಇಲ್ಲಿಯವರೆಗೂ ಸಾಕಷ್ಟು ಇವೆಂಟ್‌ಗಳನ್ನು ಮಾಡಿದ್ದೇವೆ. ಅದಕ್ಕೆ ಓಂಕಾರ ಹಾಕಿದ್ದು ಧ್ರುವ ಸರ್ಜಾ ಅವರು. ʼಪೊಗರುʼ ಚಿತ್ರದ ಮೂಲಕ ನಮ್ಮ ಇವೆಂಟ್ ಶುರುವಾಗಿದ್ದು. ಇನ್ನು ಮೇ 9 ರಂದು ಬಿಡುಗಡೆಯಾಗಲಿರುವ ನಮ್ಮ ʼಸೂತ್ರಧಾರಿʼ ಚಿತ್ರದ ಮೂಲಕ ಚಂದನ್‌ ಶೆಟ್ಟಿ ನಾಯಕ‌ನಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ‌. ನಮ್ಮ ಚಿತ್ರಕ್ಕೆ ತಂತ್ರಜ್ಞರ ಸಹಕಾರವೂ ಅಪಾರ ಎಂದರು.

ನಟ ಚಂದನ್ ಶೆಟ್ಟಿ ಮಾತನಾಡಿ, ನನ್ನ ಪ್ರತಿಭೆಯನ್ನು ಮೊದಲು ಗುರುತಿಸಿದ್ದು ಸರ್ಜಾ‌ ಕುಟುಂಬದವರು. ನಾನು ನಾಯಕನಾಗಿ ನಟಿಸಿರುವ ಮೊದಲ ಚಿತ್ರದ ಟ್ರೈಲರ್ ಬಿಡುಗಡೆಗೆ ಧ್ರುವ ಸರ್ಜಾ ಬಂದಿದ್ದಾರೆ. ಈ ಸಮಯದಲ್ಲಿ ನನಗೆ ಅವರ ಮೊದಲ ಚಿತ್ರ ʼಅದ್ದೂರಿʼಯ ಬಿಡುಗಡೆ ದಿನದ ನೆನಪಾಗುತ್ತಿದೆ. ಬಿಡುಗಡೆಯ ಹಿಂದಿನ ದಿನ ಬೆಳಗ್ಗಿನ ಜಾವದವರೆಗೂ ಅವರು ಹಾಗೂ ನಾನು ಚಿತ್ರಮಂದಿರಗಳಿಗೆ ಭೇಟಿ ನೀಡಿದ್ದು, ಮಾರ್ನಿಂಗ್ ಶೋ ಮುಗಿದ ಕೂಡಲೆ‌ ಜನ ಧ್ರುವ ಅವರ ಅಭಿನಯ ನೋಡಿ ಸಂಭ್ರಮಿಸಿದ್ದು, ಇಂದು ನೆನಪಿಗೆ ಬರುತ್ತಿದೆ. ಅವರಿಗೆ ಧನ್ಯವಾದ ಹೇಳುತ್ತಾ, ಇನ್ನೂ ʼಸೂತ್ರಧಾರಿʼ ನಾನು ನಾಯಕನಾಗಿ ನಟಿಸಿರುವ ಮೊದಲ ಚಿತ್ರ. ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿದ್ದೇನೆ. ನಾನು ನಾಯಕನಾಗಲೂ ನವರಸನ್ ಅವರೆ ಪ್ರಮುಖ ಕಾರಣ ಎಂದರು.

Chandan Shetty (1)

ಈ ಸುದ್ದಿಯನ್ನೂ ಓದಿ | Kuladalli keelyavudo Movie: ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಶೀರ್ಷಿಕೆ ಗೀತೆ ಅನಾವರಣ ಮಾಡಿದ ಶತಾಯುಷಿ ಸಾಲುಮರದ ತಿಮ್ಮಕ್ಕ

ನಿರ್ದೇಶಕ ಕಿರಣ್ ಕುಮಾರ್, ನಾಯಕಿ ಅಪೂರ್ವ, ನಟರಾದ ಸಂಜಯ್ ಗೌಡ, ʼನಟನʼ ಪ್ರಶಾಂತ್, ಲೋಹಿತ್, ರಮೇಶ್ ಮಾಸ್ಟರ್, ಗಣೇಶ್ ನಾರಾಯಣ್, ಹಾಡು ಬರೆದಿರುವ ಕಿನ್ನಾಳ್ ರಾಜ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು. ನಿರ್ಮಾಪಕರಾದ ಚೇತನ್ ಗೌಡ ಹಾಗೂ ರಾಜೇಶ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.