Actor Ajay Rao: ಮತ್ತೆ ಒಂದಾದ ನಟ ಅಜಯ್ ರಾವ್- ಸಪ್ನಾ ದಂಪತಿ
ಈ ಕುರಿತಂತೆ ನಟ ಅಜಯ್ ರಾವ್ ಪತ್ನಿ ಸಪ್ನ ಅವರು ಇನ್ಸ್ಟಾಗ್ರಾಮ್ ಅಲ್ಲಿ ಪೋಸ್ಟ್ ಹಾಕಿ ತಾಯಿಯಾಗಿ ನನ್ನ ಮೊದಲ ಜವಾಬ್ದಾರಿ ನನ್ನ ಮಗಳ ಸುರಕ್ಷತೆ, ಗೌರವ ಮತ್ತು ಅವಳ ಭವಿಷ್ಯಕ್ಕಾಗಿ ನಾನು ಪ್ರತಿದಿನ ಧೈರ್ಯವನ್ನು ಕೂಡಿಸಿ, ನನಗೆ ತೀವ್ರವಾಗಿ ಪರೀಕ್ಷಿಸುವ ಸವಾಲುಗಳನ್ನು ಎದುರಿಸುತ್ತಿದ್ದೇನೆ ಎಂದಿದ್ದಾರೆ.

ಬೆಂಗಳೂರು : ಕನ್ನಡ ಚಿತ್ರರಂಗದ (sandalwood) ಜನಪ್ರಿಯ ನಟರಲ್ಲಿ ಒಬ್ಬರಾದ ಅಜಯ್ ರಾವ್ (Actor Ajay Rao) ದಾಂಪತ್ಯದಲ್ಲಿ ಬಿರುಕು ಮೂಡಿತ್ತು. ನಟ ಅಜಯ್ ರಾವ್ ವಿರುದ್ಧ ಅವರ ಪತ್ನಿ ಸಪ್ನಾ ಅವರು ಕೌಟುಂಬಿಕ ದೌರ್ಜನ್ಯ (domestic violence) ತಡೆ ಕಾಯ್ದೆಯಡಿ ದೂರು ಸಹ ದಾಖಲಿಸಿದ್ದರು. ಆದರೆ ಇದೀಗ ಮತ್ತೊಂದು ದಿಢೀರ್ ಬೆಳವಣಿಗೆಯಲ್ಲಿ ಮತ್ತೆ ನಟ ಅಜಯ್ ರಾವ್ ಹಾಗೂ ಪತ್ನಿ ಸಪ್ನ ದಂಪತಿಗಳು ಒಂದಾಗಿದ್ದಾರೆ. ಈ ಮೂಲಕ ಸ್ಯಾಂಡಲ್ ವುಡ್ ಜನಪ್ರಿಯ ನಟ ಅಜಯ್ ರಾವ್ ದಾಂಪತ್ಯ ಬಿರುಗಾಳಿ ತಣ್ಣಗಾದಂತೆ ಆಗಿದೆ.
ಈ ಕುರಿತಂತೆ ನಟ ಅಜಯ್ ರಾವ್ ಪತ್ನಿ ಸಪ್ನ ಅವರು ಇನ್ಸ್ಟಾಗ್ರಾಮ್ ಅಲ್ಲಿ ಪೋಸ್ಟ್ ಹಾಕಿ ತಾಯಿಯಾಗಿ ನನ್ನ ಮೊದಲ ಜವಾಬ್ದಾರಿ ನನ್ನ ಮಗಳ ಸುರಕ್ಷತೆ, ಗೌರವ ಮತ್ತು ಅವಳ ಭವಿಷ್ಯಕ್ಕಾಗಿ ನಾನು ಪ್ರತಿದಿನ ಧೈರ್ಯವನ್ನು ಕೂಡಿಸಿ, ನನಗೆ ತೀವ್ರವಾಗಿ ಪರೀಕ್ಷಿಸುವ ಸವಾಲುಗಳನ್ನು ಎದುರಿಸುತ್ತಿದ್ದೇನೆ ಎಂದಿದ್ದಾರೆ.
ಪ್ರಿಯ ಸ್ನೇಹಿತರೆ ಮತ್ತು ಸಹೋದರರೆ, ಈ ಹಂತದಲ್ಲಿ ನಾನು ಮತ್ತು ನನ್ನ ಮಗಳು ನಮ್ಮ ಬದುಕನ್ನು ಪುನರ್‌ನಿರ್ಮಿಸಿಕೊಳ್ಳಲು ಮತ್ತು ನಮ್ಮ ದಾಂಪತ್ಯ ಜೀವನವನ್ನು ಪುನಃ ನಿರ್ಮಿಸಿಕೊಳ್ಳಲು ನಿಮ್ಮ ಹಾರೈಕೆಗಳು ಮತ್ತು ಪ್ರಾರ್ಥನೆಗಳನ್ನು ನಿಮ್ಮಲಿ ಕೇಳಿಕೊಳ್ಳುತ್ತಿದೇನೆ ಎಂದು ಹೇಳಿದ್ದಾರೆ.
ನಾನು ಅತ್ಯಂತ ಗೌರವದಿಂದ ತಿಳಿಸಲು ಬಯಸುವುದೇನೆಂದರೆ, ಈ ವಿಷಯವು ನಮ್ಮ ವೈಯಕ್ತಿಕ, ಆಳವಾದ ಭಾವನಾತ್ಮಕ ಮತ್ತು ದಾಂಪತ್ಯ ಜೀವನಕ್ಕೆ ಮಾತ್ರ ಸಂಬಂಧಿಸಿದ್ದೇ ಹೊರತು ಬೇರೆ ಯಾವುದೇ ರೀತಿಯಲ್ಲಿ ಸಂಬಂಧಿಸಿಲ್ಲ ಎಂದು ತಿಳಿಸಲು ಬಯಸುತೇನೆ. ಕೃತಜ್ಞತೆಗಳೊಂದಿಗೆ ಸಪ್ನ ಅಜಯ್ ರಾವ್ ಎಂದು ಪೋಸ್ಟ್ ನಲ್ಲಿ ತಿಳಿಸಿದ್ದಾರೆ. ಈ ಮೂಲಕ ನಟ ಅಜಯ್ ರಾವ್, ಪತ್ನಿ ಸಪ್ನ ಜೊತೆಯಾಗಿ ದಾಂಪತ್ಯವನ್ನು ಮುನ್ನಡೆಸುವಂತ ಮಾಹಿತಿಯನ್ನು ನೀಡಿದ್ದಾರೆ.